ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮಬಂಗಾಳ, ನಾಗಾಲ್ಯಾಂಡ್‌ ರಾಜ್ಯಪಾಲರ ರಾಜೀನಾಮೆ?

Last Updated 23 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹುದ್ದೆ ತ್ಯಜಿಸುವಂತೆ ಕೇಂದ್ರದ ಎನ್‌ಡಿಎ ಸರ್ಕಾರದ ಒತ್ತಡಕ್ಕೆ ಮಣಿದಿರುವ ನಾಗಾಲ್ಯಾಂಡ್‌ ರಾಜ್ಯಪಾಲ ಅಶ್ವನಿ ಕುಮಾರ್ ಹಾಗೂ ಪಶ್ಚಿಮಬಂಗಾಳ ರಾಜ್ಯಪಾಲ ಎಂ.ಕೆ.ನಾರಾಯಣನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಕೇಂದ್ರಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

ಶೀಘ್ರವೇ ಹುದ್ದೆಯಿಂದ ನಿರ್ಗಮಿಸು­ವುದಾಗಿ ಅಶ್ವನಿ ಕುಮಾರ್ ಅವರು ಗೃಹ ಸಚಿವಾಲಯಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ನಿವೃತ್ತ ಐಪಿಎಸ್‌ ಅಧಿಕಾರಿ, 63 ವರ್ಷದ ಕುಮಾರ್ ಈ ಮೊದಲು ಸಿಬಿಐ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

  ಇನ್ನು ಎಂ.ಕೆ.ನಾರಾಯಣನ್‌ ಅವರು ತಮ್ಮ ರಾಜೀನಾಮೆಗೆ ಸಮಯ ಕೇಳಿದ್ದಲ್ಲದೇ ಈ ಅವಧಿಯಲ್ಲಿ ತಮ್ಮ ಮೇಲೆ ಒತ್ತಡ ಹಾಕಬಾರದು ಎಂದೂ ಹೇಳಿದ್ದಾರೆ ಎನ್ನಲಾಗಿದೆ.

ನಾರಾಯಣನ್‌ ಕೂಡ ನಿವೃತ್ತ ಐಪಿಎಸ್‌ ಅಧಿಕಾರಿ. ಇವರು ಗುಪ್ತಚರ ದಳದ  ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT