ಇಸ್ಲಾಮಾಬಾದ್ (ರಾಯಿಟರ್ಸ್): ಭಾರಿ ಪ್ರಮಾಣದ ಶಸ್ತ್ರಸಜ್ಜಿತ ಉಗ್ರರ ಗುಂಪೊಂದು ಕರಾಚಿಯಲ್ಲಿರುವ ಜಿನ್ನಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಭಾನುವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ದಾಳಿಕೋರರು ಸೇರಿ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ.

ಮಧ್ಯರಾತ್ರಿ ವೇಳೆ ಪಾಕ್ ಸೈನಿಕರ ಧಿರಿಸಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದ 10 ಉಗ್ರರು ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದವು. ಸುಮಾರು ಐದು ಗಂಟೆಗಳ ಕಾಲ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು.

ದಾಳಿಯಲ್ಲಿ 20-25 ವಯೋಮಾನದ 10 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದು, ಅವರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯಲ್ಲಿ ವಿಮಾನಗಳಿಗೆ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ಅರೆಸೇನಾ ಪಡೆಯ ಮೂಲಗಳು ತಿಳಿಸಿವೆ.

ತಾಲಿಬಾನಿ ಉಗ್ರಗಾಮಿಗಳ ಜತೆ ಮಾತುಕತೆ ನಡೆಸಿ ಪರಸ್ಪರ ದಾಳಿ, ಹತ್ಯೆಯಂಥ ಕೃತ್ಯಗಳನ್ನು ಅಂತ್ಯಗೊಳಿಸಲು ಪ್ರಧಾನಿ ನವಾಜ್ ಷರೀಫ್ ಸರ್ಕಾರ ಚಿಂತನೆ ನಡೆಸಿರುವ ಬೆನ್ನಲ್ಲೇ ಈ ದಾಳಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.