ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಶಸ್ತ್ರಾಸ್ತ್ರ ಹೊಂದಿರುವುದೇ ನಿಜವಾದ ಸಮಸ್ಯೆ: ಟ್ರಂಪ್‌

Last Updated 28 ಏಪ್ರಿಲ್ 2016, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ‘ನಾವು ಪಾಕಿಸ್ತಾನಕ್ಕೆ ಆರ್ಥಿಕ ನೆರವು ನೀಡುತ್ತಿದ್ದರೂ, ಆ ದೇಶ ದ್ವಿಮುಖ ನೀತಿ ಅನುಸರಿಸುತ್ತಿದೆ’ ಎಂದು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕನ್‌ ಪಕ್ಷದ ಆಕಾಂಕ್ಷಿಯಾಗಿರುವ ಡೊನಾಲ್ಡ್‌ ಟ್ರಂಪ್ ಹೇಳಿದ್ದಾರೆ.

‘ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವುದೇ ನಮಗೆ ನಿಜವಾದ ಸಮಸ್ಯೆ’ ಎಂದು ಅವರು ಹೇಳಿದ್ದಾರೆ. ಈ ವಿಷಯದಲ್ಲಿ ಅಗತ್ಯಬಿದ್ದರೆ ಭಾರತ ಸೇರಿದಂತೆ ಬೇರೆ ರಾಷ್ಟ್ರಗಳ ನೆರವು ಪಡೆಯುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

‘ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವುದೇ ನಮಗೆ ಅತಿ ದೊಡ್ಡ ಸಮಸ್ಯೆ. ಈಗ ಒಂಬತ್ತು ರಾಷ್ಟ್ರಗಳು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿವೆ. ಪಾಕಿಸ್ತಾನ ಭಾಗಶಃ ಅಸ್ಥಿರವಾಗಿದೆ. ಪೂರ್ಣವಾಗಿ ಅಸ್ಥಿರವಾಗುವುದನ್ನು ನೋಡಲು ನಾವು ಬಯಸುವುದಿಲ್ಲ. ಪಾಕಿಸ್ತಾನದೊಂದಿಗೆ ಸ್ವಲ್ಪ ಮಟ್ಟಿಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ. ಅದನ್ನು  ಮುಂದುವರಿಸಿಕೊಂಡು ಹೋಗಲು ಬಯಸುತ್ತೇವೆ’ ಎಂದು ತಿಳಿಸಿದ್ದಾರೆ.

‘ನಾವು ನೆರವು ಕೇಳದೆ ಇದ್ದರೂ ಭಾರತ ಹಾಗೂ ಇತರ ರಾಷ್ಟ್ರಗಳು ನಮಗೆ ಸಹಾಯ ಮಾಡಬಹುದು. ನಾವು ಅನೇಕ ರಾಷ್ಟ್ರಗಳಿಗೆ ಅಪಾರ ಪ್ರಮಾಣದಲ್ಲಿ ಆರ್ಥಿಕ ನೆರವು ನೀಡಿದ್ದೇವೆ. ಅದನ್ನು ವಾಪಸ್‌ ಪಡೆದಿಲ್ಲ. ಇದು ಅತಿ ಶೀಘ್ರವೇ ನಿಲ್ಲಲಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT