ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ದೂರವಿಡಲು ಸಲಹೆ

Last Updated 29 ಜೂನ್ 2016, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಉಗ್ರಗಾಮಿ ಸಂಘಟನೆಗಳನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ಎಲ್ಲ ರೀತಿಯ ನೆರವು ಸ್ಥಗಿತಗೊಳಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕಗೊಳಿಸುವ ನೀತಿಯನ್ನು ಅಮೆರಿಕ ಅಳವಡಿಸಿಕೊಳ್ಳಬೇಕು ಎಂದು ಮಾಜಿ ರಾಜತಾಂತ್ರಿಕ ಝಲ್ಮೆ ಖಲಿಲ್‌ಝಾದ್‌ ಆಗ್ರಹಿಸಿದ್ದಾರೆ.
ತಾಲಿಬಾನ್‌, ಹಖ್ಖಾನಿ  ಸಂಘಟನೆಗಳನ್ನು ಬೆಂಬಲಿಸುವ ಮೂಲಕ ಆಫ್ಘಾನಿಸ್ತಾನವನ್ನು ಅಸ್ಥಿರಗೊಳಿಸಲು ಪ್ರಯತ್ನಗಳನ್ನು ಮುಂದುವರಿಸುತ್ತಿರುವ ಪಾಕಿಸ್ತಾನ, ಎರಡನೇ ಉತ್ತರ ಕೊರಿಯಾ  ಆಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನಕ್ಕೆ ಮಿಲಿಟರಿ ಮತ್ತು ನಾಗರಿಕ ನೆರವು ನೀಡಬಾರದು. ಜತೆಗೆ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್‌) ಆರ್ಥಿಕ ನೆರವು ದೊರೆಯಲು ಬೆಂಬಲ ನೀಡಬಾರದು ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ತನ್ನ ಧೋರಣೆಯನ್ನು ಬದಲಾಯಿಸಿಕೊಂಡರೆ ಮಾತ್ರ ಅಮೆರಿಕ ಆ ದೇಶಕ್ಕೆ ಬೆಂಬಲ ನೀಡಬೇಕು ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನ ಸದಾ ದ್ವಿಮುಖ ನೀತಿಯನ್ನು ಅನುಸರಿಸುತ್ತಾ ಬಂದಿದೆ. ಒಂದೆಡೆ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕಕ್ಕೆ ನೆರವು ನೀಡುವುದಾಗಿ ಹೇಳುವ ಪಾಕಿಸ್ತಾನ, ಇನ್ನೊಂದೆಡೆ ಆಫ್ಘಾನಿಸ್ತಾನವನ್ನು ಅಸ್ಥಿರಗೊಳಿಸುತ್ತಿದೆ. ವಾಸ್ತವದಲ್ಲಿ ತಾಲಿಬಾನ್‌ ಮತ್ತು ಹಖ್ಖಾನಿ ಸಂಘಟನೆಗಳಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ದೂರಿದ್ದಾರೆ. ಜಾರ್ಜ್‌ ಬುಷ್‌ ಆಡಳಿತಾವಧಿಯಲ್ಲಿ ಖಲಿಝಾದ್‌ ಹಿರಿಯ ರಾಜತಾಂತ್ರಿಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT