ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಕಿಂಗ್ ಸ್ಥಳ ಕುರಿತು ಮಾಹಿತಿ ನೀಡುವ‘ಆ್ಯಪ್‌’

Last Updated 7 ಫೆಬ್ರುವರಿ 2016, 19:33 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿಯ ಕೇಂದ್ರ ವಾಣಿಜ್ಯ ಪ್ರದೇಶದಲ್ಲಿ (ಸೆಂಟ್ರಲ್‌ ಬಿಸಿನೆಸ್‌ ಡಿಸ್ಟ್ರಿಕ್ಟ್‌– ಸಿಬಿಡಿ) ಸಾರ್ವಜನಿಕರು ವಾಹನಗಳ ನಿಲುಗಡೆಗೆ ಸ್ಥಳ ಹುಡುಕಲು ಇನ್ನು ಮುಂದೆ ಕಷ್ಟ ಪಡಬೇಕಿಲ್ಲ.

ಬಿಬಿಎಂಪಿ, ಸಾರಿಗೆ ಇಲಾಖೆಗೆ ನಗರದಲ್ಲಿ ಸಮರ್ಪಕವಾಗಿ ವಾಹನ ನಿಲುಗಡೆ ಸೌಲಭ್ಯ ಕಲ್ಪಿಸಲು ಸಾಧ್ಯವಾಗದಿರುವ ಸಂದರ್ಭದಲ್ಲಿ, ಎಲ್ಲೆಲ್ಲಿ ವಾಹನ ನಿಲುಗಡೆ ಸ್ಥಳವಿದೆ ಎಂಬ ಬಗ್ಗೆ ಮಾಹಿತಿ ಒದಗಿಸಲು ‘plonk’ ಎಂಬ ಆ್ಯಪ್‌ ಅಭಿವೃದ್ಧಿಪಡಿಸಲಾಗಿದೆ.

ನಗರದ ಇಬ್ಬರು ಉದ್ಯಮಿಗಳು ಈ ಆ್ಯಪ್‌ನ್ನು ಅಭಿವೃದ್ಧಿಪಡಿಸಿದ್ದಾರೆ. ‘ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲು  ನಗರದಲ್ಲಿ ಈಗಾಗಲೇ 33 ವಾಣಿಜ್ಯ ಕಟ್ಟಡಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಆ್ಯಪ್ ಅಭಿವೃದ್ಧಿಪಡಿಸಿದವರಲ್ಲಿ ಒಬ್ಬರಾದ ಪ್ಲಾಂಕ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಜುನ್‌ ಜೈರಾಜ್‌ ಹೇಳಿದರು.

‘ಈಗಾಗಲೇ ಒಂದು ಸಾವಿರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ 10 ಸಾವಿರ ವಾಹನಗಳ ನಿಲುಗಡೆಗೆ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ’ ಎಂದರು.

‘ಒಂದು ವಾರದ ಹಿಂದೆ ಈ ಆ್ಯಪ್‌ ಅಭಿವೃದ್ಧಿಪಡಿಸಿ, ಬಿಡುಗಡೆ ಮಾಡಲಾಗಿದೆ. ಇದನ್ನು ಆ್ಯುಂಡ್ರಾಯ್ಡ್‌ ಫೋನ್‌ಗಳಲ್ಲಿ ಡೌನ್‌ಲೋಡ್ ಮಾಡಿಕೊಂಡು ಅದರಲ್ಲಿ ನೋಂದಾಯಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಆ್ಯಪ್‌ನಲ್ಲಿ ಪಾರ್ಕಿಂಗ್‌ ಕಟ್ಟಡ ಇರುವ ಸ್ಥಳ, ಎಷ್ಟು ವಾಹನಗಳ ನಿಲುಗಡೆಗೆ ಸ್ಥಳವಿದೆ, ಪಾರ್ಕಿಂಗ್ ಶುಲ್ಕ ಎಷ್ಟು ಎಂಬ ಬಗ್ಗೆ ಮಾಹಿತಿ ಸಿಗುತ್ತದೆ ಎಂದರು.

‘ಅಲ್ಲದೇ, ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಆಸಕ್ತಿ ಇರುವವರು ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಕಟ್ಟಡ ಮಾಲೀಕರು ಸುಲಭವಾಗಿ ಆದಾಯ ಗಳಿಸಬಹುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT