ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ: ₹ 1,260 ಕೋಟಿ ಆಸ್ತಿ ತೆರಿಗೆ ಸಂಗ್ರಹ

Last Updated 30 ಜೂನ್ 2016, 19:32 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಮೊದಲ ಮೂರು ತಿಂಗಳಲ್ಲಿ ಬಿಬಿಎಂಪಿಗೆ ₹ 1,260 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಕಳೆದ ಸಾಲಿನ ಇದೇ ಅವಧಿಯಲ್ಲಿ ₹ 1,205 ಕೋಟಿ ತೆರಿಗೆ ಸಂಗ್ರಹವಾಗಿತ್ತು.

ಆಸ್ತಿ ತೆರಿಗೆ ಪಾವತಿಸುವ ಸಲುವಾಗಿ ಪಾಲಿಕೆಯಲ್ಲಿ ಈ ಬಾರಿ ನೂತನ ತಂತ್ರಾಂಶವನ್ನು ಅಳವಡಿಸಿದ್ದರಿಂದ ಹಲವು ಗೊಂದಲಗಳು ಉಂಟಾಗಿ ಮೊದಲ ಎರಡು ತಿಂಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ಕುಂಟುತ್ತಾ ಸಾಗಿತ್ತು. ಹೈಕೋರ್ಟ್‌ ಆದೇಶದಂತೆ ಮಾನ್ಯತಾ  ಟೆಕ್ ಪಾರ್ಕ್‌ನವರು ₹ 54 ಕೋಟಿ ಬಾಕಿ ಹಣವನ್ನು ಪಾವತಿ ಮಾಡಿದ್ದಾರೆ.

ಪ್ರಸಕ್ತ ವರ್ಷದ ₹38.96 ಕೋಟಿ ಮೊತ್ತವನ್ನು ಪಾವತಿ ಮಾಡಿದ್ದಾರೆ ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಶಿವರಾಜು ತಿಳಿಸಿದರು. ಜುಲೈ ತಿಂಗಳಿನಿಂದ ತೆರಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT