ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾವಗಡಕ್ಕೆ ಕುಡಿಯುವ ನೀರಿನ ಯೋಜನೆ: ಒತ್ತಾಯ

Last Updated 28 ಫೆಬ್ರುವರಿ 2015, 19:37 IST
ಅಕ್ಷರ ಗಾತ್ರ

ಬೆಂಗಳೂರು: ಜಲಕ್ಷಾಮದಿಂದ ತತ್ತರಿಸಿ­ರುವ ಪಾವಗಡ ತಾಲ್ಲೂಕಿಗೆ 2015–16ರ ಬಜೆಟ್‌ನಲ್ಲಿ ಸಮಗ್ರ ಕುಡಿ­ಯುವ ನೀರಿನ  ಯೋಜನೆ ಮಂಜೂರು ಮಾಡ­ಬೇಕು  ಎಂದು ‘ಜಲಕ್ಕಾಗಿ ಜನವೇದಿಕೆ’ ಸಂಘಟನೆಯ ಅಧ್ಯಕ್ಷ ಸ್ವಾಮಿ ಜಪಾನಂದ ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾ­ಡಿದ ಅವರು, ಫ್ಲೋರೈಡ್‌­ಯುಕ್ತ ನೀರಿ­ನಿಂದಾಗಿ ಪಾವಗಡದ ನಾಗರಿಕರು ಅನೇಕ ದೀರ್ಘಕಾಲಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಮಕ್ಕಳು ಅಂಗ­ವೈಕಲ್ಯಕ್ಕೆ ಒಳಗಾಗಿದ್ದಾರೆ. ಮೂಳೆ ಸವೆತ, ಕಿಡ್ನಿ ಕಲ್ಲು, ಗರ್ಭಕೋಶದ ಕಾಯಿಲೆಗಳಿಂದ ಜನ ತೊಂದರೆ ಅನುಭ­ವಿ­ಸುತ್ತಿದ್ದಾರೆ. ಶುದ್ಧ ಕುಡಿ­ಯುವ ನೀರಿಗಾಗಿ 30 ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಯೋಜನೆ ರೂಪಿಸಿಲ್ಲ’ ಎಂದು ಆರೋಪಿಸಿದರು.

ಪಾವಗಡಕ್ಕೆ ತುಂಗಭದ್ರ ಅಥವಾ ಹೇಮಾವತಿ ಜಲಾಶಯದಿಂದ ಶುದ್ಧ ಕುಡಿಯುವ ನೀರು ಒದಗಿಸಲು ₹400 ಕೋಟಿ ಮೀಸಲಿಡಬೇಕು ಎಂದು ಒತ್ತಾ­ಯಿ­ಸಿದ ಅವರು, ಪಾವಗಡದ ವಿವಿಧ ಸಂಘಟನೆಗಳ ಮುಖಂಡರ ನಿಯೋಗ ಮಾರ್ಚ್‌ 2­ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದೆ ಎಂದರು.

ವಿಧಾನಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ, ಚಿತ್ರದುರ್ಗ ಸಂಸದ ಚಂದ್ರಪ್ಪ, ಪಾವಗಡ ಶಾಸಕ ತಿಮ್ಮರಾಯಪ್ಪ, ಪಾವಗಡ ತಾಲ್ಲೂಕು ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಆರ್.ಪಿ. ಸಾಂಬಸದಾಶಿವರೆಡ್ಡಿ  ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT