ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ: ಗೊಂದಲ ಪರಿಹಾರ

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರ ಸಭೆ
Last Updated 22 ಮೇ 2015, 20:32 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಯಲ್ಲಿ ಆಗಿರುವ ತಪ್ಪುಗಳ ಕುರಿತ ಗೊಂದಲ ಬಹುತೇಕ ತಿಳಿಯಾಗಿದೆ. ಈ ಇಡೀ ಪ್ರಕರಣದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಲಾಖೆ ತೀರ್ಮಾನಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ  ಕಿಮ್ಮನೆ ರತ್ನಾಕರ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಮನೆ ಮಾಡಿರುವ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗದ ಕ್ರಮಗಳ ಬಗ್ಗೆ ಚರ್ಚಿಸಿದರು.

ಅಧಿಕಾರಿಗಳೊಂದಿಗೆ ಮಾತುಕತೆ: ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ಶಾಸಕ ಸುರೇಶ್‌ ಕುಮಾರ್, ಜೆಡಿಎಸ್‌ ಶಾಸಕ ಹಮೀರ್‌ ಅಹಮದ್‌, ವಿಧಾನಪರಿಷತ್‌ ಸದಸ್ಯ ಅಶ್ವತ್ಥನಾರಾಯಣ,  ಎಎಪಿ ಮುಖಂಡ ರವಿಕೃಷ್ಣಾ ರೆಡ್ಡಿ ಅವರು ಇಲಾಖೆ ನಿರ್ದೇಶಕಿ ಸುಷಮಾ ಗೋಡ್‌ಬೋಲೆ ಹಾಗೂ ಇತರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇಲಾಖೆ ಮತ್ತು ಸರ್ಕಾರದ ನಿರ್ಲಕ್ಷ್ಯವೇ ಈ ಗೊಂದಲಕ್ಕೆ ಕಾರಣ. ಸರ್ವೋದಯ ಸಮಾವೇಶ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯೇ ಸರ್ಕಾರಕ್ಕೆ ಮುಖ್ಯವಾಗಿದೆ’ ಎಂದು ದೂರಿದರು.

ಶುಕ್ರವಾರ ಮಧ್ಯಾಹ್ನದ ನಂತರ ನಿರ್ದೇಶಕರ ಕಚೇರಿಗೆ ಬಂದ ಸಚಿವ ಕಿಮ್ಮನೆ ರತ್ನಾಕರ ಅವರು ಪ್ರತಿಭಟನಾಕಾರರನ್ನು ಮನವೊಲಿಸಲು

ಯತ್ನಿಸಿದರು. ಗೊಂದಲಕ್ಕೆ ಕಾರಣವಾದ ಅಂಶಗಳನ್ನು ವಿವರಿಸಿದ ಸಚಿವರು, ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದರು.

ಕುಸಿದು ಬಿದ್ದ ವಿದ್ಯಾರ್ಥಿನಿ: ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದರು. ತಕ್ಷಣ ಆಕೆಯನ್ನು ಕೆ.ಸಿ. ಜನರಲ್‌ ಆಸ್ಪತ್ರೆಗೆ ದಾಖಲಿಸಲಾಯಿತು.   ನಿರ್ದೇಶಕರ ಕಚೇರಿಗೆ ನುಗ್ಗಲು ಯತ್ನಿಸಿದ  ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಯತ್ನಿಸಿದಾಗ ಉಂಟಾದ ತಳ್ಳಾಟದಲ್ಲಿ ಮಹಿಳೆಯೊಬ್ಬರು ಗಾಯಗೊಂಡ ಘಟನೆಯೂ ನಡೆಯಿತು.

25ರ ನಂತರ ಅವಕಾಶ: ಉತ್ತರ ಪತ್ರಿಕೆಗಳ ಛಾಯಾಪ್ರತಿಗಳಿಗಾಗಿ ಅರ್ಜಿ ಸಲ್ಲಿಸಿದವರಿಗೆ ಎರಡು ದಿನಗಳಲ್ಲಿ ಅವರ ಉತ್ತರ ಪತ್ರಿಕೆಗಳ ಪ್ರತಿಗಳನ್ನು ನೀಡುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕಿಮ್ಮನೆ ರತ್ನಾಕರ, ಛಾಯಾ ಪ್ರತಿಗಳಿಗಾಗಿ ಅರ್ಜಿ ಸಲ್ಲಿಸಲು 25ರವರೆಗೆ ಅವಕಾಶ ಇದೆ.  ಇವುಗಳ ನಿರ್ವಹಣೆಗೆ ಪ್ರತ್ಯೇಕ ಘಟಕವನ್ನು ಸ್ಥಾಪಿಸಿ,  ಶೀಘ್ರವಾಗಿ ಉತ್ತರ ಪತ್ರಿಕೆಗಳನ್ನು ಸ್ಪೀಡ್‌ ಪೋಸ್ಟ್‌ ಮೂಲಕ ಅರ್ಜಿದಾರರ ವಿಳಾಸಕ್ಕೆ ಕಳುಹಿಸಲಾಗುವುದು. ಆ ನಂತರ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು’ ಎಂದರು.
*
ಎಲ್ಲಿ ಲೋಪವಾಗಿದೆ ಎಂಬುದನ್ನು ಪತ್ತೆ ಹಚ್ಚಿ ಅಧಿಕಾರಿಗಳು ಹಾಗೂ ಮೌಲ್ಯಮಾಪಕರ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಣ ಸಚಿವರು ಮುಂದಾಗಲಿ.
– ಜಗದೀಶ ಶೆಟ್ಟರ್‌,
ವಿಧಾನಸಭೆ ವಿರೋಧ ಪಕ್ಷದ ನಾಯಕ

*
ಅಂಕಿ ಅಂಶ
20,623 ಉತ್ತರ ಪತ್ರಿಕೆಗಳ ಛಾಯಾಪ್ರತಿಗಾಗಿ ಬಂದಿರುವ ಅರ್ಜಿ
2,825 ಮರುಮೌಲ್ಯಮಾಪನಕ್ಕಾಗಿ ಸಲ್ಲಿಸಿರುವ ಅರ್ಜಿ
43 ಸಾವಿರ ಕಳೆದ ವರ್ಷ ಛಾಯಾಪ್ರತಿಗಾಗಿ ಬಂದಿದ್ದ ಬೇಡಿಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT