ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವಸಿದ್ಧತೆ ಅಗತ್ಯ

ಅಕ್ಷರ ಗಾತ್ರ

ಇನ್ನು ಏಳು ವರ್ಷಗಳಲ್ಲಿ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ರಾಷ್ಟ್ರವಾಗಲಿದೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಹೇಳಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಜನಸಂಖ್ಯೆ ಹೆಚ್ಚಳದಿಂದ ಮಾನವ ಸಂಪನ್ಮೂಲ ಹೆಚ್ಚಳವಾದಂತೆ ತೋರಿದರೂ, ಅನೇಕ ಗಂಭೀರ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ ಎಂಬುದು ಅರಿಯದ ವಿಚಾರವೇನಲ್ಲ. ಎಲ್ಲರಿಗೂ ಆಹಾರ, ವಸತಿ, ಶಿಕ್ಷಣ, ಉದ್ಯೋಗ, ಆರೋಗ್ಯ ಹೀಗೆ ಹತ್ತು ಹಲವು ಮೂಲಭೂತ ಸೌಲಭ್ಯ ಒದಗಿಸುವುದು ಸುಲಭವೇನಲ್ಲ.

ಕುಸಿಯುತ್ತಿರುವ ಜಲಸಂಪನ್ಮೂಲ, ವಿಪರೀತ ರಾಸಾಯನಿಕ ಗೊಬ್ಬರಗಳು ಹಾಗೂ ಕೀಟನಾಶಕಗಳ ಬಳಕೆಯಿಂದ ಬರಡುಗೊಳ್ಳುತ್ತಿರುವ ಭೂಮಿ, ಹೆಚ್ಚುತ್ತಿರುವ ಪರಿಸರ ಮಾಲಿನ್ಯ ನೂರೆಂಟು ಸಮಸ್ಯೆಗಳನ್ನು ಈಗಾಗಲೇ ಹುಟ್ಟುಹಾಕಿವೆ. ಕೃಷಿಯತ್ತ ಆಕರ್ಷಣೆ ಹಿಂದೆಂದಿಗಿಂತಲೂ ಇಂದು ಕ್ಷೀಣಗೊಳ್ಳುತ್ತಿದೆ. ರೈತರ ಆತ್ಮಹತ್ಯೆ ಸಾಮಾನ್ಯ ಸಂಗತಿಯಾಗಿದೆ. ಇಂತಹ ಸಂಕ್ರಮಣ ಸ್ಥಿತಿಯಲ್ಲಿ ಜನಸಂಖ್ಯೆಯ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಬಹುದು. ಜನಸಂಖ್ಯೆ ನಿಯಂತ್ರಣಕ್ಕೆ ಅಗತ್ಯವೆನಿಸುವ ಯೋಜನೆಗಳನ್ನು ಇನ್ನಷ್ಟು ಜನಪ್ರಿಯಗೊಳಿಸಬೇಕಿದೆ.

ಜನಸಂಖ್ಯೆ ಹೆಚ್ಚಳದ ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸುವುದು ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ  ಸೃಷ್ಟಿಯಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ತುರ್ತಾಗಿ ಸನ್ನದ್ಧಗೊಳ್ಳಬೇಕಿದೆ. ಸಂತತಿ ಹೆಚ್ಚಿಸುವ ಬಗ್ಗೆ ನಮ್ಮಲ್ಲಿ ಬೇರೂರಿರುವ ಧಾರ್ಮಿಕ ನಂಬಿಕೆಗಳನ್ನು ಪುನರ್ ವ್ಯಾಖ್ಯಾನಕ್ಕೆ ಒಳಪಡಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT