ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಶ್ರೀ ಪರ್ಯಾಯ ಮಹೋತ್ಸವಕ್ಕೆ ಗಣ್ಯರ ದಂಡು

Last Updated 13 ಜನವರಿ 2016, 19:30 IST
ಅಕ್ಷರ ಗಾತ್ರ

ಉಡುಪಿ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್‌, ರಾಜಸ್ತಾನದ ಮುಖ್ಯಮಂತ್ರಿ ವಸುಂಧರಾ ರಾಜೇ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇಂದ್ರ– ರಾಜ್ಯದ ಮಂತ್ರಿಗಳು ಸೇರಿದಂತೆ 50ಕ್ಕೂ ಅಧಿಕ ಗಣ್ಯರು ಪೇಜಾವರ ಪರ್ಯಾಯ ಮಹೋತ್ಸವಕ್ಕೆ ಆಗಮಿಸಲಿದ್ದಾರೆ.

ರಾಜಾಂಗಣದ ಸಮೀಪ ಇರುವ ಯಾತ್ರಿ ನಿವಾಸದಲ್ಲಿ ಬುಧವಾರ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ವಿಶ್ವೇಶತೀರ್ಥ ಸ್ವಾಮೀಜಿ, ಅನೇಕ ಗಣ್ಯರು ಪರ್ಯಾಯೋತ್ಸವದಲ್ಲಿ ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಹಿರಿಯ ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ, ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಸುರೇಶ್‌ ಪ್ರಭು, ಉಮಾ ಭಾರತಿ, ಅನಂತ ಕುಮಾರ್‌, ಸದಾನಂದ ಗೌಡ, ಸ್ಮೃತಿ ಇರಾನಿ, ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ಸಚಿವರಾದ ಜಿ. ಪರಮೇಶ್ವರ್‌, ಆರ್‌.ವಿ. ದೇಶಪಾಂಡೆ, ಎಚ್‌.ಕೆ. ಪಾಟೀಲ್‌, ವಿನಯ ಕುಮಾರ್‌ ಸೊರಕೆ ಸೇರಿದಂತೆ ಹಲವರು ಉಪಸ್ಥಿತರಿರುವರು ಎಂದರು.

ಪರ್ಯಾಯಕ್ಕೆ ಐದು ದಿನ ಮಾತ್ರ ಬಾಕಿ ಉಳಿದಿದ್ದು ಎಲ್ಲ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಇಡೀ ರಾಜ್ಯದ ಜನರು ಸಹಕಾರ ನೀಡುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಹೊರೆಕಾಣಿಕೆಯೂ ಸಂಗ್ರಹವಾಗುತ್ತಿದೆ. ಈಗಾಗಲೇ ಆರಂಭವಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 17ರಂದು ಎಲ್ಲ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. 18ರಂದು  ಪರ್ಯಾಯದ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಸರ್ವಾಧ್ಯಕ್ಷರೂ ಆದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಪರ್ಯಾಯ ಮೆರವಣಿಗೆಯನ್ನು ಅತ್ಯಂತ ವೈಭವಯುತವಾಗಿ ನಡೆಸಲಾಗುವುದು. ಜಾನಪದ ಕಲಾತಂಡಗಳ ಜತೆಗೆ ವಿವಿಧ ರಾಜ್ಯಗಳ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT