ಪ್ಯಾರಿಸ್ (ಐಎಎನ್ಎಸ್): ಫ್ರೆಂಚ್ ವಿಡಂಬನಾತ್ಮಕ ವಾರಪತ್ರಿಕೆ ‘ಚಾರ್ಲಿ ಹೆಬ್ಡೊ’ ಕಚೇರಿಯಲ್ಲಿ ಬುಧವಾರ ಇಬ್ಬರು ಮುಸುಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಪತ್ರಿಕೆಯ ಪ್ರಧಾನ ಸಂಪಾದಕ, ನಾಲ್ವರು ವ್ಯಂಗ್ಯಚಿತ್ರಕಾರರು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ.

‘ಚಾರ್ಲಿ ಹೆಬ್ಡೊ’ ಪತ್ರಿಕೆಯಲ್ಲಿ ಪ್ರವಾದಿ ಮಹಮ್ಮದ್ ಅವರನ್ನು ಅವಹೇಳನಕಾರಿಯಾಗಿ ಬಣ್ಣಿಸಿದ್ದ ಕಾರಣಕ್ಕೆ ಮುಸುಕುಧಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿ ನಡೆಯುವ ಒಂದು ಗಂಟೆಗೂ ಮುನ್ನಾ ಐಎಸ್ ಮುಖ್ಯಸ್ಥ ಅಬೂಬಕರ್ ಅಲ್ಬಗ್ದಾದಿ ವ್ಯಂಗ್ಯ ಚಿತ್ರವೊಂದನ್ನು ಪತ್ರಿಕೆಯು ಟ್ವೀಟ್ ಮಾಡಿತ್ತು.

ಗುಂಡಿನ ದಾಳಿ ನಡೆಸಿದ ಬಳಿಕ ‘ಪ್ರತೀಕಾರ ತೀರಿತು’ ಎಂಬ ಘೋಷಣೆಗಳನ್ನು ಕೂಗುತ್ತಾ, ವಾಹನ ನಿಲುಗಡೆ ಪ್ರದೇಶದಿಂದ ಕಪ್ಪು ಬಣ್ಣದ ಕಾರಿನಲ್ಲಿ ದುಷ್ಕರ್ಮಿಗಳು ಪರಾರಿಯಾಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

‘ಚಾರ್ಲಿ ಹೆಬ್ಡೊ’ ಪತ್ರಿಕೆಯಲ್ಲಿ 2011ರಲ್ಲಿ ಪ್ರವಾದಿ ಮಹಮ್ಮದ್ ಅವರ ಬಗ್ಗೆ ವ್ಯಂಗ್ಯ ಚಿತ್ರ ಪ್ರಕಟವಾಗಿದ್ದ ಮರುದಿನ ಕಚೇರಿಯ ಮೇಲೆ ಬಾಂಬ್ ದಾಳಿ ನಡೆದಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.