ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿವರ್ಷ 50 ಸಾವಿರ ಅಂಗನವಾಡಿ ನಿರ್ಮಾಣ: ಮೇನಕಾ ಗಾಂಧಿ

Last Updated 1 ಡಿಸೆಂಬರ್ 2015, 13:00 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಪ್ರತಿ ವರ್ಷ 50 ಸಾವಿರ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಸರ್ಕಾರ ಉದ್ದೇಶಿಸಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ 2 ಲಕ್ಷ ಅಂಗನವಾಡಿಗಳು ಸ್ವಂತ ಕಟ್ಟಡವನ್ನು ಹೊಂದಲಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ತಿಳಿಸಿದ್ದಾರೆ.

‌ಇಲ್ಲಿನ ವಿಜ್ಞಾನ ಭವನದಲ್ಲಿ  ನಡೆದ ಶ್ರೇಷ್ಠ ಸಾಧನೆಗೈದ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು. ಈ ಯೋಜನೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ ಐಸಿಡಿಎಸ್‌ ಆರ್ಥಿಕ ನೆರವು ನೀಡುತ್ತಿವೆ ಎಂದರು.

‘ಮಕ್ಕಳನ್ನು ಕೂರಿಸಲು, ಅವರನ್ನು ರಕ್ಷಿಸಲು ಹಾಗೂ ಅವರಿಗೆ ಸೂಕ್ತ ರೀತಿಯಲ್ಲಿ ಊಟ ಮಾಡಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಾವು ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುತ್ತಿದ್ದೇವೆ. ಸೂಕ್ತ ಕಟ್ಟಡ ಇಲ್ಲದಿದ್ದರೆ ನಿಮಗೆ ಎದುರಾಗುವ ಸಮಸ್ಯೆಯ ಬಗ್ಗೆ ನನಗೆ ಅರಿವಿದೆ’ ಎಂದು ನುಡಿದರು. 

ದೇಶದಾದ್ಯಂತ 13.4 ಲಕ್ಷ  ಅಂಗನವಾಡಿ ಕೇಂದ್ರಗಳಿವೆ. ಅವುಗಳ ಪೈಕಿ  2 ಲಕ್ಷ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿಲ್ಲ. ಅವು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ ಎಂದರು.

ಅಪೌಷ್ಠಿಕತೆ ಹೆಚ್ಚಾಗಿರುವ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ 11 ರಾಜ್ಯಗಳಲ್ಲಿ ಪ್ರಸಕ್ತ ಹಣಕಾಸು ವರ್ಷದಿಂದ 50 ಸಾವಿರ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT