ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣಿಕನ ಕೆನ್ನೆಗೆ ಹೊಡೆದ ಸ್ಟಾಲಿನ್‌?

Last Updated 2 ಜುಲೈ 2015, 9:46 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಚೆನ್ನೈ ಮೆಟ್ರೋ ರೈಲಿನಲ್ಲಿ ಡಿಎಂಕೆ ಪಕ್ಷದ ಮುಖಂಡ ಎಂ.ಕೆ.ಸ್ಟಾಲಿನ್‌ ಪ್ರಯಾಣಿಕರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ.

ಸ್ಟಾಲಿನ್‌ ಮೆಟ್ರೋ ರೈಲಿನಲ್ಲಿ ಬೆಂಬಲಿಗರ ಜೊತೆ ಪ್ರಯಾಣಿಸುವಾಗ ಈ ಘಟನೆ ನಡೆದಿದೆ. ಸ್ಟಾಲಿನ್‌ ಯುವಕರೊಬ್ಬರಿಗೆ ಕಪಾಳಕ್ಕೆ ಹೊಡೆಯುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸ್ಟಾಲಿನ್‌ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಟಾಲಿನ್‌ ನಾನು ಆ ಯುವಕನ ಕಪಾಳಕ್ಕೆ ಹೊಡೆದಿಲ್ಲ ಬದಲಿಗೆ ಅಲ್ಲಿ ಮಹಿಳೆಯರಿದ್ದಾರೆ ಮುಂದೆ ಸರಿಯುವಂತೆ ಕೈ ಸನ್ನೆ ಮಾಡಿದೆ ಎಂದು ತಿಳಿಸಿದ್ದಾರೆ.

ಈ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಖಂಡಿಸಿದ್ದಾರೆ.

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT