ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಕೃತಿಕ ವಿಕೋಪ: ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Last Updated 6 ಮೇ 2016, 5:22 IST
ಅಕ್ಷರ ಗಾತ್ರ

ಉಡುಪಿ: ಮೇ ಅಂತ್ಯದೊಳಗೆ ಮುಂಗಾರು ಜಿಲ್ಲೆಯನ್ನು ಪ್ರವೇಶಿಸಲಿದೆ. ಹವಾಮಾನ ತಜ್ಞರ ಪ್ರಕಾರ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇರುವುದರಿಂದ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಈಗಲೇ ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್‌ ಸೂಚನೆ ನೀಡಿದರು.

ಮಳೆಗಾಲದ ಸಿದ್ಧತೆಯ ಬಗ್ಗೆ ಚರ್ಚಿಸಲು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರ್ಮಾಣ ಕಾಮಗಾರಿಗಳಿಂದಾಗಿ ಕೃತಕ ನೆರೆ ಸಂಭವಿಸುವ ಸಾಧ್ಯತೆಗಳಿವೆ. ಕಲ್ಲುಕೋರೆಗಳಲ್ಲಿ ತುಂಬಿದ ನೀರಿನಲ್ಲಿ ಮುಳುಗಿ ಜನರು ಮೃತಪಟ್ಟ ಹಲವು ಘಟನೆಗಳು ಈ ಹಿಂದೆ ನಡೆದಿವೆ. ಆದ್ದರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯವರು ಈಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಾಕೃತಿಕ ವಿಕೋಪ ನಿರ್ವಹಣೆ ಮಾಡಲು ಹಾಗೂ ಅಗತ್ಯ ಸಂದರ್ಭಗಳಲ್ಲಿ ತುರ್ತಾಗಿ ಸ್ಪಂದಿಸಲು ಈಗಲೇ ಸಿದ್ಧರಾಗಿ ಎಂದರು.

ಅತಿಯಾದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ತಯಾರಿ ನಡೆಸಿ. ಜೀವ ಹಾನಿ, ಬೆಳೆಹಾನಿ ಹಾಗೂ ಆಸ್ತಿ ನಷ್ಟ ಸಂಭವಿಸಿದಾಗ ವಿವಿಧ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಆದಷ್ಟು ಬೇಗ ಪರಿಹಾರ ನೀಡಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿಯೂ ಚುರುಕಾಗಿ ಕೆಲಸ ಮಾಡಬೇಕು ಎಂದರು.

ತಹಶೀಲ್ದಾರ್‌ಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT