ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ನಲ್ಲಿ ಅಶ್ಲೀಲ ಚಿತ್ರ: ವಿದ್ಯಾರ್ಥಿನಿ ಆತ್ಮಹತ್ಯೆ

Last Updated 26 ಜೂನ್ 2014, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಹದಿಹರೆಯದವರ ಫೇಸ್‌ಬುಕ್‌ ಅವಾಂತರಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ತನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅಶ್ಲೀಲ ಭಾವಚಿತ್ರಗಳನ್ನು ಹಾಕಿದ್ದರಿಂದ ಅವಮಾನಗೊಂಡ 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.

ಬೆಹಲಾ ಪೊಲೀಸ್‌ ಠಾಣಾ ವ್ಯಾಪ್ತಿಯ ಪರ್ಣಶ್ರೀ ನಿವಾಸಿಯಾಗಿದ್ದ  18ರ  ಈ ಯುವತಿ ಆರು ತಿಂಗಳ ಹಿಂದೆ ಫೇಸ್‌ಬುಕ್‌ ಮೂಲಕ ಸ್ನೇಹಿತನಾದ ಫೈಜಲ್‌ ಇಮಾನ್‌ ಖಾನ್‌ ಎಂಬ ಯುವಕನನ್ನು ಭೇಟಿಯೂ ಆಗಿದ್ದಳು.   ನಂತರ ಇವರಿಬ್ಬರ ನಡುವೆ ಮನಸ್ತಾಪವಾಗಿತ್ತು. ಆದರೆ ಆತ  ಆಕೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿದ್ದಲ್ಲದೆ ಆಕೆಯ ದೂರವಾಣಿ ಸಂಖ್ಯೆ ಹಾಗೂ ಅಶ್ಲೀಲ ಚಿತ್ರಗಳನ್ನು ಅಪ್‌ಲೋಡ್‌ ಮಾಡಿದ್ದ. ಇದು ಆಕೆಯ ಗಮನಕ್ಕೆ ಬಂದು ಮಂಗಳವಾರ ರಾತ್ರಿ  ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಪ ಪೊಲೀಸ್‌ ಆಯುಕ್ತ ಆರ್.ಖಾನ್‌ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಯುವತಿ ಆರು ಪುಟಗಳ ಪತ್ರ ಬರೆದಿರಿಸಿದ್ದಾರೆ. ಘಟನೆಗೆ ಸಂಬಂಧಿಸಿ ಖಾನ್‌ ಮತ್ತು ಆತನ   ಸ್ನೇಹಿತರಾದ ದೀಪಕ್‌ ಹಾಗೂ ಸತೀಶ್‌  ಅವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT