ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡಗಿ ಸಾವು

Last Updated 26 ಜುಲೈ 2016, 19:40 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರಹಳ್ಳಿ ಸಮೀಪದ ಚಿಕ್ಕಲಸಂದ್ರ ಬಳಿ ಸೋಮವಾರ ರಾತ್ರಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಮುರುಗೇಶ್ (33) ಎಂಬ ಬಡಗಿ ಸಾವನ್ನಪ್ಪಿದ್ದಾರೆ.

ಉತ್ತರಹಳ್ಳಿ ಸಮೀಪದ ಅರೇಹಳ್ಳಿ ನಿವಾಸಿಯಾದ ಮುರುಗೇಶ್, ಸೋಮವಾರ ಸಂಜೆ ಕದಿರೇನಹಳ್ಳಿಯ ಸಂಬಂಧಿಕರ ಮನೆಗೆ ಹೋಗಿದ್ದರು. ಅಲ್ಲಿಂದ ರಾತ್ರಿ 11 ಗಂಟೆಗೆ ಬೈಕ್‌ನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡ ಅವರನ್ನು, ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಆರೋಪಿ ಚಾಲಕ, ಕ್ಯಾಂಟರ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT