ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ತಿಗೆ ವಯೋಮಿತಿ ಹೆಚ್ಚಳ: ಅಭಿಪ್ರಾಯ ಕೋರಿದ ಕೇಂದ್ರ

Last Updated 26 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಜ್ಯ ಸೇವೆಯಲ್ಲಿರುವ ಅಧಿಕಾರಿಗಳಿಗೆ ಐಎಎಸ್‌, ಐಪಿಎಸ್‌ ಶ್ರೇಣಿಗೆ ಬಡ್ತಿ ನೀಡಲು ಗರಿಷ್ಠ ವಯೋಮಾನದ ಮಿತಿಯನ್ನು ಹೆಚ್ಚಿಸುವ ಸಂಬಂಧ ಕೇಂದ್ರವು ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿದೆ.

ರಾಜ್ಯ ಸೇವೆಯಲ್ಲಿರುವ ಅಧಿಕಾರಿಗಳಿಗೆ ಐಎಎಸ್‌, ಐಪಿಎಸ್‌ ಮತ್ತು ಐಎಫ್‌ಎಸ್‌ ಶ್ರೇಣಿಗೆ ಬಡ್ತಿ ನೀಡಲು ಪ್ರಸ್ತುತ ಗರಿಷ್ಠ 54 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರವು ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಹೆಚ್ಚಿಸಿದ ಬಳಿಕ ರಾಜ್ಯ ಸೇವೆಯಲ್ಲಿರುವ ಅಧಿಕಾರಿಗಳ ಬಡ್ತಿ ವಯೋಮಿತಿಯನ್ನು ಗರಿಷ್ಠ 54 ವರ್ಷದಲ್ಲೇ ಇರಿಸಿದ್ದನ್ನು ಕೆಲವು ರಾಜ್ಯಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ, ವಯೋಮಿತಿಯ ಹೆಚ್ಚಳಕ್ಕೆ ಒತ್ತಾಯಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT