ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುಮಹಡಿ ಕಟ್ಟಡ: ಸದ್ಯಕ್ಕೆ ಡಿವಿಎಸ್ ನಿರಾಳ

ಹೈಕೋರ್ಟ್ ತೀರ್ಪು ತಳ್ಳಿಹಾಕಿದ ಸುಪ್ರೀಂ
Last Updated 27 ನವೆಂಬರ್ 2015, 10:49 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಒಟ್ಟಿಗೆ ಸೇರಿ ಬಹುಮಹಡಿ ಕಟ್ಟಡ ನಿರ್ಮಿಸಿರುವುದು ಕಾನೂನುಬಾಹಿರ ಎಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ.

ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಸಮರ್ಥನೀಯ ಕ್ರಮವಲ್ಲ ಎಂದು ನ್ಯಾ. ಮದನ್ ಬಿ ಲೋಕೂರ್ ಹಾಗೂ ಎಸ್.ಎ. ಬೊಬ್ಡೆ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದ್ದು, ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸದಾನಂದ ಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ನಿಯಮ ಮೀರಿ ಕಟ್ಟಡ ನಿರ್ಮಿಸಲಾಗಿದೆ ಎಂದು ದೂರಿ ಪತ್ರಕರ್ತೆ ನಾಗಲಕ್ಷ್ಮೀ ಬಾಯಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯಲ್ಲಿ ಈ ಕಟ್ಟಡ ನಿರ್ಮಿಸಲಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಹೈ ಕೋರ್ಟ್ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT