ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಸ್ಪಷ್ಟ ಬಹುಮತ; ಎರಡಂಕಿ ದಾಟದ ಕಾಂಗ್ರೆಸ್‌

Last Updated 16 ಮೇ 2014, 14:13 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರೀ ಕುತೂಹಲ ಕೆರಳಿಸಿದ್ದ 16ನೇ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಭಾರತೀಯ ಜನತಾ ಪಕ್ಷ ನಿಚ್ಚಳ ಬಹುಮತ ಪಡೆದಿದ್ದು ಅಧಿಕಾರದ ಗದ್ದುಗೆ ಹಿಡಿದಿದೆ.

ಮೋದಿ ಅಲೆಗೆ ಚಿತ್‌ ಆದ ಕಾಂಗ್ರೆಸ್‌ ನೇತೃತ್ವದ ಯುಪಿಎ ಅಂಗ ಪಕ್ಷಗಳು ನೆಲ ಕಚ್ಚಿವೆ. ಉತ್ತರ ಭಾರತದಲ್ಲಿ ಬಿಜೆಪಿ ಸಂಪೂರ್ಣವಾಗಿ ಪಾರಮ್ಯ ಮೆರೆದಿದೆ.

ರಾಜಸ್ಥಾನ, ಗುಜರಾತ್, ದೆಹಲಿ ಮತ್ತು ಮಧ್ಯಪ್ರದೇಶಗಳಲ್ಲಿ ಎಲ್ಲಾ ಸ್ಥಾನಗಳನ್ನು ಬಿಜೆಪಿ ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆದಿದ್ದೆ.

ಯುಪಿಎ ಸರ್ಕಾರದ ವೈಫಲ್ಯಗಳು ಮತ್ತು ಹಗರಣಗಳಿಂದ ಹೈರಣಾಗಿದ್ದ ಮತದಾರ ಬಿಜೆಪಿಯ ಕೈಹಿಡಿದಿದ್ದಾನೆ. ತಮಿಳುನಾಡು, ಸೀಮಾಂಧ್ರ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಈ ಬಾರೀ ಬಿಜೆಪಿ ಖಾತೆ ತೆರೆದಿದೆ.

ಪಕ್ಷಗಳ ಬಲಾಬಲ

ಎನ್‌ಡಿಎ: 335
ಯುಪಿಎ: 60
ಇತರೆ: 148

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT