ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಸಿ ಸೇರಿದ ಡಿಎಂಕೆ ಮುಖಂಡ

ಸಂಕ್ಷಿಪ್ತ ಸುದ್ದಿ
Last Updated 21 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಚೆನ್ನೈ (ಐಎಎನ್‌ಎಸ್‌): ಮಾಜಿ ಕೇಂದ್ರ ಸಚಿವ ಹಾಗೂ ಡಿಎಂಕೆ ಮುಖಂಡ ನೆಪೋಲಿಯನ್ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಸಮ್ಮುಖದಲ್ಲಿ ಭಾನುವಾರ ಬಿಜೆಪಿ ಸೇರಿದ್ದಾರೆ. ಯುಪಿಎ ಮೊದಲನೇ ಸರ್ಕಾರದಲ್ಲಿ ಸಚಿವರಾಗಿದ್ದ ನೆಪೋಲಿಯನ್, ಶನಿ­ವಾರ ಡಿಎಂಕೆಗೆ ರಾಜೀನಾಮೆ ನೀಡಿ­ದ್ದರು. ಇದೇ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಗಂಗೈ ಅಮರನ್ ಕೂಡ ಬಿಜೆಪಿ ಸೇರಿದರು.

ಸೋನಿಯಾ ಆರೋಗ್ಯದಲ್ಲಿ ಚೇತರಿಕೆ
ನವದೆಹಲಿ (ಐಎಎನ್‌ಎಸ್‌):
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಸರ್‌ ಗಂಗಾ ರಾಮ್‌ ಆಸ್ಪತ್ರೆ ವೈದ್ಯರು ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಸೋನಿಯಾ ಅವರ ಆರೋಗ್ಯ ಸುಧಾರಿಸಿದ್ದು, ಸ್ಥಿರವಾಗಿದೆ. ಯಾವ ಸಮಸ್ಯೆಯೂ ಇಲ್ಲದೆಯೇ ಉಸಿರಾಟದ ವ್ಯಾಯಾಮ­ದಲ್ಲಿ ತೊಡಗಿಕೊಂಡರು ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT