ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಆವರಣದಲ್ಲಿ ಸರಣಿ ಪ್ರತಿಭಟನೆ

Last Updated 27 ಫೆಬ್ರುವರಿ 2015, 20:06 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾ­ನಗರ ಪಾಲಿಕೆ (ಬಿಬಿಎಂಪಿ) ಕೌನ್ಸಿಲ್‌ ಸಭೆ ನಡೆದ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣ­ದಲ್ಲಿ ಸರಣಿ ಪ್ರತಿಭಟನೆಗಳು ನಡೆದವು.

‘ಕಳೆದ 23 ತಿಂಗಳಿಂದ ಬಾಕಿ ಉಳಿಸಿ­ಕೊಂಡಿರುವ ಗುತ್ತಿಗೆ ಮೊತ್ತವನ್ನು ಬಿಡುಗಡೆ ಮಾಡಬೇಕು’ ಎಂದು  ಆಗ್ರ­ಹಿಸಿ ಬಿಬಿಎಂಪಿ ಕಾರ್ಯ­ನಿರತ ಗುತ್ತಿಗೆ­ದಾರರ ಸಂಘ ಸದಸ್ಯರು ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್‌, ಕಾರ್ಯ­ದರ್ಶಿ ಟಿ. ವೆಂಕಟೇಶ್‌ ನೇತೃತ್ವ ವಹಿಸಿದ್ದರು.

ಗುತ್ತಿಗೆದಾರರ ಅಹವಾಲು ಸ್ವೀಕರಿಸಿ ಮಾತನಾಡಿದ ಆಯುಕ್ತ ಎಂ.ಲಕ್ಷ್ಮೀ­ನಾರಾಯಣ, ‘ಬಜೆಟ್‌ ಗಾತ್ರಕ್ಕೆ ತಕ್ಕಂತೆ ವರಮಾನ ಸಂಗ್ರಹ ಆಗದೇ ಇರುವು­ದ­ರಿಂದ ಸಮಸ್ಯೆಯಾಗಿದೆ. ರಾಜ್ಯ ಸರ್ಕಾರ ಒಂದೆರಡು ದಿನಗಳಲ್ಲಿ ₨ 300 ಕೋಟಿ ಅನುದಾನ ಬಿಡುಗಡೆ ಮಾಡ­ಲಿದ್ದು, ಆ ಮೊತ್ತವನ್ನು ಗುತ್ತಿಗೆದಾರರ ಬಾಕಿ ಪಾವತಿಗೆ ಬಳಸಲಾಗುವುದು’ ಎಂದು ಭರವಸೆ ನೀಡಿದರು.

ನಾಲ್ಕು ಸಾವಿರ ಪೌರ ಕಾರ್ಮಿಕರ ನೇಮಕಕ್ಕೆ ಆಗ್ರಹಿಸಿ ಬಿಬಿಎಂಪಿ ಸದಸ್ಯ ಟಿ.ಮಲ್ಲೇಶ್‌ ಅವರ ನೇತೃತ್ವದಲ್ಲಿ ಬಿಬಿಎಂಪಿ ಎಸ್‌ಸಿ, ಎಸ್‌ಟಿ ನೌಕರರ ಸಂಘದ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು. ‘ಸರ್ಕಾರ­ದಿಂದ ಅನುಮತಿ ಸಿಕ್ಕೊಡನೆ ಭರ್ತಿ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಆಯುಕ್ತರು ಭರವಸೆ ನೀಡಿದರು.

ಕಾಕ್ಸ್‌ಟೌನ್‌ನ ಸ್ಟೂಡೆಂಟ್‌ ಯೂನಿ­ಯನ್‌ ಫುಟ್‌ಬಾಲ್‌ ಕ್ಲಬ್‌ನ ಆಟಗಾ­ರರು ಫುಟ್‌ಬಾಲ್‌ ಆಡಲು ಬಿಬಿಎಂಪಿ ಮೈದಾನವನ್ನು ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT