ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಗದ್ದಲ

ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಬಿಜೆಪಿ ಸದಸ್ಯರ ಪ್ರತಿಭಟನೆ
Last Updated 29 ಏಪ್ರಿಲ್ 2016, 8:35 IST
ಅಕ್ಷರ ಗಾತ್ರ

ಬೆಂಗಳೂರು: ಆಸ್ತಿ ತೆರಿಗೆ ಹೆಚ್ಚಳ ಆದೇಶ ವಾಪಸ್‌ ಪಡೆಯುವಂತೆ ಒತ್ತಾಯಿಸಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪ್ರತಿಪಕ್ಷ ಬಿಜೆಪಿಯ ಸದಸ್ಯರು ಕೌನ್ಸಿಲ್‌ ಸಭೆಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಕೆಂಪೇಗೌಡ ಪೌರಸಭಾಂಗಣದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಷಯವಾಗಿ ಆಡಳಿತ ಪಕ್ಷ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ಮಧ್ಯೆ ಮಾತಿಗೆ ಮಾತು ಬೆಳೆದು ತೀವ್ರ ಗದ್ದಲ ಉಂಟಾಯಿತು.

ಬಿಜೆಪಿ ಸದಸ್ಯರು ಮೇಯರ್‌ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ಸದಸ್ಯರು ಮೇಯರ್‌ ಪೀಠದತ್ತ ಜಮಾಯಿಸಿದ ವೇಳೆ ನೂಕಾಟದಿಂದಾಗಿ ಗದ್ದಲ ಹೆಚ್ಚಾಯಿತು.

ಸಭೆ ಸುಗಮವಾಗಿ ನಡೆಯಲು ಬಿಜೆಪಿ ಸದಸ್ಯರು ಸಹಕರಿಸಬೇಕೆಂದು ಮೇಯರ್‌ ಬಿ.ಎನ್‌.ಮಂಜುನಾಥ ರೆಡ್ಡಿ ಅವರು ಮಾಡಿದ ಮನವಿಯಿಂದ ಯಾವುದೇ ಪ್ರಯೋಜನವಾಗಲಿಲ್ಲ.

ಗದ್ದಲ ನಡೆಸಿದ ಕಾರಣಕ್ಕೆ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ಎಂ.ನಾಗರಾಜ್‌, ಉಮೇಶ್‌ ಶೆಟ್ಟಿ ಮತ್ತು ರಮೇಶ್‌ ಕುಮಾರ್‌ ಅವರನ್ನು ಮೇಯರ್‌ ಅಮಾನತುಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT