ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಲಿನ ತಾಪ: ದೆಹಲಿಯಲ್ಲಿ ಶಾಲೆಗಳಿಗೆ ರಜೆ

Last Updated 3 ಮೇ 2016, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಿರುಬೇಸಿಗೆಯಿಂದ ತತ್ತರಿಸಿರುವ ರಾಜಧಾನಿಯಲ್ಲಿ, ನಿಗದಿಪಡಿಸಿದ ದಿನಕ್ಕಿಂತ ಮುನ್ನವೇ ಶಾಲೆಗಳಿಗೆ ಬೇಸಿಗೆ ರಜೆ ನೀಡಲಾಗಿದೆ.

ಮೇ 11ರಿಂದ ಶಾಲೆಗಳಿಗೆ ರಜೆ ನೀಡುವಂತೆ ಎಲ್ಲ ಖಾಸಗಿ ಮತ್ತು ಸರ್ಕಾರಿ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಿಗೆ ಸೂಚಿಸಿದ್ದು. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿ ವರ್ಷ ಸರ್ಕಾರಿ ಶಾಲೆಗಳಿಗೆ ಮೇ 10ರಿಂದ ರಜೆ ನೀಡಲಾಗುತ್ತದೆ. ಆದರೆ, ಖಾಸಗಿ ಶಾಲೆಗಳು ತಮ್ಮದೇ ಆದ  ವೇಳಾಪಟ್ಟಿಯನ್ನು ರೂಪಿಸಿಕೊಂಡಿವೆ. ಹೀಗಾಗಿ ಸರ್ಕಾರ ಈ ಕ್ರಮಕೈಗೊಂಡಿದೆ.

ಮಹಾನಗರದಲ್ಲಿ ಕೆಂಡದಂತಹ ಬಿಸಿಲಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೋಮವಾರ ರಾಜಧಾನಿಯಲ್ಲಿ 44 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು.

ಭುವನೇಶ್ವರ ವರದಿ: ಒಡಿಶಾದ ತಲ್ಚೇರ್‌ ನಗರದಲ್ಲಿ ಬಿಸಿಲಿನ ತಾಪಮಾನ ತೀವ್ರವಾಗಿದ್ದು, ಮಂಗಳವಾರ 44.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT