ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ

Last Updated 6 ಮೇ 2016, 12:02 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಿವಿಧೆಡೆ ಶುಕ್ರವಾರ ಮಧ್ಯಾಹ್ನದಿಂದ ರಾತ್ರಿವರೆಗೂ ಸುರಿದ  ಆಲಿಕಲ್ಲು  ಮಳೆ ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆಯಿತು.

ಸುಮಾರು 5 ಗಂಟೆಗೂ ಅಧಿಕ ಕಾಲ ಬಿರುಸಿನಿಂದ ಸುರಿದ ಮಳೆಗೆ  ನಗರದಲ್ಲಿ ನೂರಾರು ಮರಗಳು ಧರೆಗುರುಳಿವೆ. ಹತ್ತು ಕಡೆಗಳಲ್ಲಿ ಮಳೆ ನೀರು ಮನೆಗೆ ನುಗ್ಗಿದ ವರದಿಯಾಗಿದೆ.

ಕನಕಪುರ ರಸ್ತೆ, ಬನಶಂಕರಿ, ಪದ್ಮನಾಭನಗರ, ಗಾಂಧಿನಗರ, ಶಿವಾಜಿನಗರ, ಎಂ.ಜಿ.ರಸ್ತೆ, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರ, ಜೆ.ಪಿ.ನಗರ, ಬಸವನಗುಡಿ, ನೆಲಮಂಗಲ, ಕೆ.ಆರ್‌ ಪುರ, ಇತರ ಪ್ರದೇಶಗಳಲ್ಲಿ ಮಳೆ ಸುರಿಯಿತು.

ಮಳೆಯ ರಭಸಕ್ಕೆ ರಸ್ತೆಗಳಲ್ಲಿ ನೀರು ತುಂಬಿದ್ದು  ನಗರದ ಬಹುತೇಕ ಭಾಗಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಇನ್ನು ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣಾ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT