ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Last Updated 31 ಜುಲೈ 2014, 13:15 IST
ಅಕ್ಷರ ಗಾತ್ರ

ಬೆಂಗಳೂರು(ಪಿಟಿಐ): ಹೆಚ್ಚುತ್ತಿರುವ ಸರಣಿ ಅತ್ಯಾಚಾರ ಪ್ರಕರಣಗಳು ಹಾಗೂ ಬೆಳಗಾವಿಯಲ್ಲಿ ಮಹಾ­ರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರ ಪುಂಡಾಟಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಬೆಂಗಳೂರು ಬಂದ್‌ಗೆ  ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ  ಬಸ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಹಾಗೇ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದು, ಹಲವು ಖಾಸಗಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದುವರೆಗೂ  ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.

ನಗರದ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ವಾಣಿಜ್ಯ ಮಳಿಗೆಗಳು, ಹೊಟೇಲ್‌ಗಳು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಹಲವು ಚಿತ್ರ ಮಂದಿರಗಳು ಸಹ ಬಂದ್‌ ನಿಮಿತ್ತ ಮುಚ್ಚಲಾಗಿದೆ.

ವಿವಿಧ ಕನ್ನಡ ಪರ ಸಂಘಟನೆಗಳು ವಾಟಾಳ್‌ ನಾಗರಾಜ್‌   ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಿದ್ದವು. ಸಾವಿರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ನಗರದ ವಿವಿಧೆಡೆ ರ್‍್ಯಾಲಿ ನಡೆಸಿದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದೆಲ್ಲಡೆ ಬಿಗಿ ಪೊಲೀಸ್‌ ಬಂದೋಬಸ್ತ್‌  ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT