ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿ 3 ಭಾಗ: ಸದನ ಅಂಗೀಕಾರ

Last Updated 17 ಜುಲೈ 2015, 10:57 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ವಿಶ್ವವಿದ್ಯಾಲಯಗಳನ್ನಾಗಿ ವಿಭಜಿಸುವ ಮಸೂದೆ ವಿಧಾನಸಭೆಯಲ್ಲಿ ಶುಕ್ರವಾರ ಮಂಡನೆಯಾಗಿ, ಧ್ವನಿಮತದ ಮೂಲಕ ಅಂಗೀಕಾರ ಪಡೆಯಿತು.  

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಅಧಿನಿಯಮದಡಿ ವಿಭಜನೆ ಮಾಡಲು ಉಲ್ಲೇಖಿಸಲಾಗಿದ್ದು, ಈ ಮಸೂದೆಗೆ ವಿಧಾನ ಮಂಡಲದ ಉಭಯ ಸದನಗಳ ಅನುಮತಿ ದೊರೆಯಬೇಕು. ಪ್ರಸ್ತುತ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು, ರಾಜ್ಯಪಾಲರ ಅಂಕಿತ ಸಿಕ್ಕರೆ ಬೆಂಗಳೂರು ದಕ್ಷಿಣ ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳು ಅಸ್ತಿತ್ವಕ್ಕೆ ಬರಲಿವೆ.

ಬೆಂಗಳೂರು ದಕ್ಷಿಣ ವಿಶ್ವವಿದ್ಯಾಲಯವು ಜ್ಞಾನಭಾರತಿ ಕ್ಯಾಂಪಸ್ ನಲ್ಲಿ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕಚೇರಿಯು ನಗರದ ಸೆಂಟ್ರಲ್‌ ಕಾಲೇಜಿನಲ್ಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಚೇರಿ ಕೋಲಾರದಲ್ಲಿರುವ ಈಗಿನ ಬೆಂಗಳೂರು ವಿ.ವಿ. ಸ್ನಾತಕೋತ್ತರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿವೆ.

ಆಕ್ಷೇಪ: ವಿಶ್ವವಿದ್ಯಾಲಯವನ್ನು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯನ್ನು ಪರಿಗಣಿಸಿ ವಿಭಜನೆ ಮಾಡಿರುವುದಕ್ಕೆ ಬಿಜೆಪಿಯ ಕೆಲ ಶಾಸಕರು ಸದನಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT