ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಹಾನಿ: ರೈತ ಆತ್ಮಹತ್ಯೆ

Last Updated 24 ಏಪ್ರಿಲ್ 2015, 20:09 IST
ಅಕ್ಷರ ಗಾತ್ರ

ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಮಲ್ಕಾಪುರ ಕ್ಯಾಂಪ್‌ನಲ್ಲಿ ನಾಗಪ್ಪ ತಂದೆ ಅಯ್ಯಪ್ಪ (38) ಎಂಬ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ 5 ಗಂಟೆಗೆ ನಡೆದಿದೆ.

ಗುರುವಾರ ರಾತ್ರಿ ಸುರಿದ ಆಲಿಕಲ್ಲು ಮಳೆ ಮತ್ತು ಗಾಳಿಯಿಂದಾಗಿ ಎರಡೂ ವರೆ ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಭತ್ತಕ್ಕೆ ಹಾನಿ ಉಂಟಾಗಿರುವುದರಿಂದ ಸಾವಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ರೈತ ಬೂದಿಹಾಳ ಕ್ಯಾಂಪ್‌ನ ಗ್ರಾಮೀಣ ಬ್ಯಾಂಕ್‌ನಲ್ಲಿ ₨70 ಸಾವಿರ ಸಾಲ ಪಡೆದಿದ್ದರು. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗಪ್ಪ ಅವರಿಗೆ ಪತ್ನಿ,  ಪುತ್ರಿ, ಪುತ್ರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT