ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್: ಸೈನಾಗೆ ಗೆಲುವು

Last Updated 18 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ದುಬೈ (ಪಿಟಿಐ): ಭಾರತದ ಸೈನಾ ನೆಹ್ವಾಲ್‌ ಮತ್ತು ಕೆ. ಶ್ರೀಕಾಂತ್‌ ಅವರು ಇಲ್ಲಿ ವಿಶ್ವ ಸೂಪರ್‌ ಸೀರಿಸ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮತ್ತೊಂದು ಗೆಲುವು ಪಡೆದಿದ್ದಾರೆ.

ವಿಶ್ವ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಆರನೇ ಸ್ಥಾನ ಪಡೆದಿರುವ ಶ್ರೀಕಾಂತ್ ಮಹತ್ವದ ಪಂದ್ಯದಲ್ಲಿ 21–18, 21–13ರಲ್ಲಿ ಇಂಡೊನೇಷ್ಯಾದ ಟಾಮಿ ಸುಗಿರ್ತೊ ಅವರನ್ನು ಮಣಿಸಿದರು.

ಹಮ್‌ದನ್‌ ಕ್ರೀಡಾ ಸಂಕೀರ್ಣದಲ್ಲಿ ನಡೆದ ಇನ್ನೊಂದು ಪಂದ್ಯದಲ್ಲಿ ಹೈದಾರಾಬಾದ್‌ನ ಸೈನಾ ಪ್ರಾಬಲ್ಯ ಮೆರೆದರು. ವಿಶ್ವ ರ್‍ಯಾಂಕ್‌ನಲ್ಲಿ ನಾಲ್ಕನೇ ಸ್ಥಾನ ಹೊಂದಿರುವ ಅವರು 21–12, 21–18ರಲ್ಲಿ ದಕ್ಷಿಣ ಕೊರಿಯಾದ ಸುಂಗ್ ಜೀ ಹುಯಾನ್‌ ಎದುರು ಗೆಲುವು ಸಾಧಿಸಿದರು. 2013ರ ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಇಬ್ಬರೂ ಆಟಗಾರ್ತಿಯರು ಮುಖಾ­ಮುಖಿಯಾಗಿದ್ದರು. ಆಗ ಸೈನಾ ಸೋಲು ಕಂಡಿದ್ದರು. ಈಗ ಭಾರತದ ಆಟಗಾರ್ತಿ ಹಿಂದಿನ ಸೋಲಿಗೆ ತಿರುಗೇಟು ನೀಡಿದ್ದಾರೆ.

ಲಂಡನ್‌ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಸೈನಾ ಮೊದಲ ಗೇಮ್‌ನಲ್ಲಿ ಸುಲಭ ಗೆಲುವು ಪಡೆದುಕೊಂಡರು. ಎರಡನೇ ಗೇಮ್‌ನಲ್ಲಿ ಅಲ್ಪ ಪ್ರತಿರೋಧ ಎದುರಿಸಿ ಗೆಲುವು ಒಲಿಸಿಕೊಂಡರು.

ಏಷ್ಯನ್‌ ಕೂಟದ ಚಾಂಪಿಯನ್ ಚೀನಾದ ಶಿಕ್ಸಿಯಾನ್‌ ವಾಂಗ್‌ ಎದುರು ಗೆಲುವು ಸಾಧಿಸಿದ್ದರು. ಸೈನಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT