ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗತ್‌ಸಿಂಗ್ ಮೊಮ್ಮಗ ಅಭಿತೇಜ್‌ ಸಾವು

Last Updated 29 ಮೇ 2016, 19:30 IST
ಅಕ್ಷರ ಗಾತ್ರ

ಶಿಮ್ಲಾ (ಪಿಟಿಐ): ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರ ಸೋದರನ ಮೊಮ್ಮಗ ಅಭಿತೇಜ್‌ ಸಿಂಗ್‌ (27) ಇಲ್ಲಿಗೆ ಸಮೀಪದ ರಾಮ್‌ಪುರ್‌ ಬುಷಾಹರ್‌ ಜಿಲ್ಲೆಯಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಸ್ಪಿಟಿ ಕಣಿವೆಯಲ್ಲಿನ ಕಾಜಾ ಪಟ್ಟಣದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಬೈಕ್‌ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡರು. ತಕ್ಷಣ ಅವರನ್ನು ರಾಮ್‌ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಾಲಿ ನಿವಾಸಿ ಅಭಿತೇಜ್‌ ಅವರು ಅಭಯ್‌ ಸಂಧು ಅವರ ಏಕೈಕ ಪುತ್ರ. ಮೊಹಾಲಿಯಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ. ಕೆಲ ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದ ಅಭಿತೇಜ್‌ ಅವರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT