ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಅಂತರ್ಜಾಲಿಗರ ಹೆಚ್ಚಳ

Last Updated 19 ನವೆಂಬರ್ 2014, 12:37 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಭಾರತದಲ್ಲಿ ಅಂತರ್ಜಾಲ ಬಳಸುವವರ ಸಂಖ್ಯೆ ಈ ವರ್ಷದ ಡಿಸೆಂಬರ್‌ ವೇಳೆಗೆ 30 ಕೋಟಿ ದಾಟಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

‘ಇಂಟರ್ನೆಟ್‌ ಅಂಡ್‌ ಮೊಬೈಲ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ’ ಮತ್ತು ‘ಐಎಂಆರ್‌ಬಿ ಇಂಟರ್‌ನ್ಯಾಷನಲ್‌’ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಸಮೀಕ್ಷೆಯ ವರದಿ ‘ಇಂಟರ್ನೆಟ್‌ ಇನ್‌ ಇಂಡಿಯಾ– 2014’ರಲ್ಲಿ ಹೇಳಲಾಗಿದೆ.

ಕಳೆದ ವರ್ಷಕ್ಕಿಂತ ಈ ವರ್ಷ ಅಂತರ್ಜಾಲ ಬಳಸುವವರ ಸಂಖ್ಯೆಯಲ್ಲಿ ಶೇ 32ರಷ್ಟು ಹೆಚ್ಚಳವಾಗಿದೆ. ಈ ವರ್ಷದ ಡಿಸೆಂಬರ್‌ ವೇಳೆಗೆ ದೇಶದಲ್ಲಿ ಅಂತರ್ಜಾಲ ಬಳಕೆದಾರರ ಸಂಖ್ಯೆ 30.2 ಕೋಟಿಗೆ ಹೆಚ್ಚಾಗಲಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ದೇಶದ ನಗರ ಪ್ರದೇಶದಲ್ಲಿ ಅಂತರ್ಜಾಲ ಬಳಕೆದಾರರ ಸಂಖ್ಯೆ 2013ರ ಅಕ್ಟೋಬರ್‌ನಿಂದ 2014ರ ಅಕ್ಟೋಬರ್‌ ಅವಧಿಯಲ್ಲಿ 177 ದಶಲಕ್ಷಕ್ಕೆ ಹೆಚ್ಚಳವಾಗಿದೆ. ಈ ಸಂಖ್ಯೆ ಈ ವರ್ಷದ ಡಿಸೆಂಬರ್‌ ವೇಳೆಗೆ 190 ದಶಲಕ್ಷ ಹಾಗೂ 2015ರ ಡಿಸೆಂಬರ್‌ ಹೊತ್ತಿಗೆ 216 ದಶಲಕ್ಷ ಹೆಚ್ಚಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ಇನ್ನು ಗ್ರಾಮೀಣ ಭಾಗದಲ್ಲಿ ಅಂತರ್ಜಾಲ ಬಳಕೆದಾರರ ಸಂಖ್ಯೆ ಈ ವರ್ಷದ ಡಿಸೆಂಬರ್‌ ವೇಳೆಗೆ 112 ದಶಲಕ್ಷಕ್ಕೆ ಹೆಚ್ಚಾಗುವ ನಿರೀಕ್ಷೆ ಇದೆ. ಈ ಸಂಖ್ಯೆ 2015ರ ಕೊನೆಗೆ 138 ದಶಲಕ್ಷಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT