ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ ಮುನ್ಸೂಚನೆ

Last Updated 27 ಆಗಸ್ಟ್ 2014, 19:50 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ      ಎಂದು ಭಾರತೀಯ ಹವಾಮಾನ ಇಲಾಖೆಯು ಬುಧವಾರ ಮುನ್ಸೂಚನೆ ನೀಡಿದೆ.

‘ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ­ದಿಂದಾಗಿ ತಾಪಮಾನ ತಗ್ಗಿದೆ. ಇದರಿಂದಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ‘ ಎಂದು ಪ್ರಾದೇಶಿಕ ಕಚೇರಿಯ ನಿರ್ದೇಶಕ ಬಿ.ಪುಟ್ಟಣ್ಣ ಹೇಳಿದರು. 

ಜೂನ್‌ 1ರಿಂದ ಆಗಸ್ಟ್‌ 27ರ ಅವಧಿಯಲ್ಲಿ ರಾಜ್ಯದಲ್ಲಿ 654.8 ಮಿ.ಮೀ. ಮಳೆಯಾಗಿದೆ. ಈ        ಅವಧಿ-­­ಯಲ್ಲಿ ವಾಡಿಕೆಯಂತೆ 684 ಮಿ.ಮೀ. ಮಳೆಯಾಗಬೇಕಿತ್ತು. ಬೆಂಗಳೂರಿನಲ್ಲಿ 102.2 ಮಿ.ಮೀ. ಮಳೆ ದಾಖಲಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 141.6 ಮಿ.ಮೀ. ಮಳೆಯಾಗಬೇಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT