ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಿಯೊಂದಿಗೆ ವಾಗ್ವಾದ: ಆಹಾರ ಇಲಾಖೆ ಉಪನಿರ್ದೇಶಕ ಅಮಾನತು

Last Updated 17 ಜೂನ್ 2014, 19:30 IST
ಅಕ್ಷರ ಗಾತ್ರ

ಬಳ್ಳಾರಿ: ಕರ್ತವ್ಯಲೋಪ ಹಾಗೂ ದುರ್ನಡತೆ ಆರೋಪದ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಮಂಟೆಸ್ವಾಮಿ ಅವ­ರನ್ನು ಸೋಮವಾರ ಅಮಾನತು ಮಾಡಲಾಗಿದೆ.

ಜೂನ್‌ 7ರಂದು ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣ­ದಲ್ಲಿ ನಡೆದಿದ್ದ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರೊಂದಿಗೆ ಮಾತಿನ ಚಕಮಕಿ ನಡೆಸಿದ್ದ ಮಂಟೆಸ್ವಾಮಿ, ‘ಸಭೆಗೆ ತಪ್ಪು ಮಾಹಿತಿ ನೀಡಬೇಡಿ’ ಎಂದು ಸಚಿವರಿಗೆ ಹೇಳಿದ್ದ­ರಿಂದ ಅವರ ವಿರುದ್ಧ  ಕ್ರಮಕ್ಕೆ ಸಚಿವರು ಶಿಫಾರಸು ಮಾಡಿದ್ದರು.

ತಾಲ್ಲೂಕಿನ ಕುರುಗೋಡು ಗ್ರಾಮ­ದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿ ವಶಪಡಿಸಿ­ಕೊಂಡಾಗ ಕೂಡಲೇ ಸ್ಥಳಕ್ಕೆ ಬಂದು, ಕ್ರಮ ಕೈಗೊಂಡಿಲ್ಲ ಎಂದು ಸಚಿವರು ಆರೋಪಿಸಿದಾಗ, ಮಂಟೆಸ್ವಾಮಿ ಅವರು ಸಚಿವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದ­ರಲ್ಲದೆ, ‘ಮಾತನಾಡದೆ ಕುಳಿತುಕೊಳ್ಳಿ’ ಎಂದು ಆದೇಶಿಸಿದರೂ ಕುಳಿತುಕೊಳ್ಳದೆ ವಾದ ಮುಂದು­ವರಿಸಿದ್ದರು. ಆದ್ದರಿಂದ ಅವರನ್ನು ಅಮಾನತು­ಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT