ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಯಲ್ಲಿ 6ರಂದು ಮಾಜಿ ಸೈನಿಕರ ಸಮ್ಮೇಳನ

Last Updated 29 ಜುಲೈ 2016, 19:30 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಮಾಜಿ ಸೈನಿಕರ ಸಮ್ಮೇಳನ ನಗರದಲ್ಲಿ ಆಗಸ್ಟ್‌ 6ರಂದು ನಡೆಯಲಿದ್ದು, ಭಾರತೀಯ ಭೂಸೇನಾ ಮುಖ್ಯಸ್ಥ ಲೆಫ್ಟಿನೆಂಟ್‌ ಜನರಲ್‌ ದಲ್ಬೀರ್‌ ಸಿಂಗ್‌ ಸುಹಾಗ್‌, ದಕ್ಷಿಣ ವಲಯದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್‌ ಜನರಲ್‌ ಬಿಪಿನ್‌ ರಾವತ್‌ ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ನಗರದ ಕ್ರಿಸ್ಟಲ್‌ ಹಾಲ್‌ನಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ 6 ಸಾವಿರಕ್ಕೂ ಹೆಚ್ಚು ಮಾಜಿ ಸೈನಿಕರು ಪಾಲ್ಗೊಳ್ಳಲಿದ್ದು, ಸೇನಾಧಿಕಾರಿಗಳ ಎದುರು ತಮ್ಮ ಅಹವಾಲುಗಳನ್ನು ಸಲ್ಲಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ಅಂದು ನಗರದ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಜನರಲ್‌ ಕೆ.ಎಸ್‌.ತಿಮ್ಮಯ್ಯ ಮ್ಯೂಸಿಯಂನ ಕಾಮಗಾರಿಯನ್ನು ಸೇನಾಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸಮ್ಮೇಳನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಸೇನಾಧಿಕಾರಿಗಳಿಗೆ  ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT