ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನಮೋಹನ್‌ ಸಿಂಗ್‌ ವಿಚಾರಣೆ ನಡೆಸಿಲ್ಲ ಯಾಕೆ? ಸಿಬಿಐ ಪ್ರಶ್ನೆ

Last Updated 25 ನವೆಂಬರ್ 2014, 10:31 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿವಾದಿತ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಯಾಕೆ ವಿಚಾರಣೆಗೆ ಒಳಪಡಿಸಿಲ್ಲ ಎಂದು ನ್ಯಾಯಾಲಯ ಸಿಬಿಐ ಅಧಿಕಾರಿಗಳನ್ನು ಮಂಗಳವಾರ ಪ್ರಶ್ನೆ ಮಾಡಿದೆ.

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದ ತನಿಖೆ ನಡೆಸುವಾಗ ನಿಮಗೆ ಅಂದಿನ ಕಲ್ಲಿದ್ದಲು ಸಚಿವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಅನ್ನಿಸಲಿಲ್ಲವೇ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಭರತ್‌ ಪರಶಾರ ಸಿಬಿಐ ಅಧಿಕಾರಿಗಳನ್ನು ಪ್ರಶ್ನಸಿದರು.

ಪ್ರಧಾನ ಮಂತ್ರಿ ಕಾರ್ಯಾಲಯದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರಿಂದ  ಕಲ್ಲಿದ್ದಲು ಖಾತೆಯನ್ನು ನಿರ್ವಹಿಸುತ್ತಿದ್ದ ಮನಮೋಹನ್‌ ಸಿಂಗ್‌ ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯ ಕಂಡುಬರಲಿಲ್ಲ ಎಂದು ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು  ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT