ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠ, ಮುಸ್ಲಿಮರಿಗೆ ಮೀಸಲಾತಿ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣು
Last Updated 26 ಜೂನ್ 2014, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ):  ಮುಂಬರುವ ವಿಧಾನ­ಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಮಹಾರಾಷ್ಟ್ರ ಸರ್ಕಾರ, ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಮರಾಠರಿಗೆ ಶೇ 16ರಷ್ಟು ಮತ್ತು ಮುಸ್ಲಿಮರಿಗೆ ಶೇ 5ರಷ್ಟು ಮೀಸಲಾತಿ ನೀಡುವ ಪ್ರಸ್ತಾವಕ್ಕೆ  ಅನುಮೋದನೆ ನೀಡಿದೆ.

ಈ ಮೂಲಕ ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ 73ಕ್ಕೆ ತಲುಪುವ ಸಾಧ್ಯತೆಯಿದೆ.

‘ಮರಾಠರನ್ನು ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿ­ದ­ವರು  ಎಂದು ಪರಿಗಣಿಸ­ಲಾಗಿದೆ.  ಆದ್ದರಿಂದ ಅವರಿಗೆ ಶೇ16ರಷ್ಟು ಮೀಸಲಾತಿ ನಿಗದಿ ಮಾಡಲಾಗುತ್ತಿದೆ. ಇನ್ನು ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುತ್ತಿಲ್ಲ. ಅವರ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಅವರಿಗೆ ಶೇ 5ರಷ್ಟು ಮೀಸಲಾತಿ
ಕಲ್ಪಿಸಲಾ­ಗುತ್ತಿದೆ’ ಎಂದು

ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌ ಅವರು ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT