ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ ಉರುಳಿ ಬಿದ್ದು ವ್ಯಕ್ತಿ ಸಾವು

Last Updated 27 ಜೂನ್ 2016, 9:47 IST
ಅಕ್ಷರ ಗಾತ್ರ

ಬೆಂಗಳೂರು: ಮರ ಉರುಳಿ ಬಿದ್ದು ಬೈಕ್ ಸವಾರ ಫೈರೋಜ್ ಪಾಷಾ (48) ಎಂಬುವವರು ಮೃತಪಟ್ಟಿರುವ ಘಟನೆ ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿ ಸೋಮವಾರ ನಡೆದಿದೆ.

ಕಲ್ಯಾಣನಗರದ  ಫೈರೋಜ್ ಪಾಷಾ ಅವರು ಮಧ್ಯಾಹ್ನ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಮರ ಬಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಕಾರು ಚಾಲಕ ಸ್ವಾಮಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಿಬಿಎಂಪಿ ಸಿಬ್ಬಂದಿ ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಲ್ಲೇಶ್ವರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಯಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮರ ಬಿದ್ದು ಸುತ್ತಮುತ್ತಲ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT