ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಡಿಯಿಂದ ಬಿದ್ದು ಸಾವು

Last Updated 31 ಆಗಸ್ಟ್ 2015, 20:02 IST
ಅಕ್ಷರ ಗಾತ್ರ

ಬೆಂಗಳೂರು: ಎಚ್‌ಎಸ್ಆರ್‌ ಲೇಔಟ್‌ನಲ್ಲಿರುವ ಶೋಭಾ ಕ್ಲಾಸಿಕ್‌ ಅಪಾರ್ಟ್‌ಮೆಂಟ್‌ನ 13ನೇ ಮಹಡಿಯಿಂದ ಬಿದ್ದು ಇಶಾ ಹಾಂಡೆ (26) ಎಂಬುವವರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ ಮೂಲದ ಇಶಾ, ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಇಬ್ಬರು ಗೆಳತಿಯರೊಂದಿಗೆ ವಾಸವಾಗಿದ್ದರು. ಮೂರೂವರೆ ವರ್ಷದ ಹಿಂದೆ ನಗರಕ್ಕೆ ಬಂದಿದ್ದ ಅವರು, ಮಸಾಜ್ ಪಾರ್ಲರ್‌ವೊಂದರಲ್ಲಿ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಭಾನುವಾರ ರಾತ್ರಿ 8.30ಕ್ಕೆ ಅಪಾರ್ಟ್‌ಮೆಂಟ್‌ಗೆೆ ಬಂದಿದ್ದ ಅವರು, 13ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಅಪಾರ್ಟ್‌ಮೆಂಟ್‌ಗೆ ಯಾರನ್ನು ಭೇಟಿ ಮಾಡಲು ಬಂದಿದ್ದರು ಎಂಬುದು ತಿಳಿದು ಬಂದಿಲ್ಲ.

ಅವರೊಂದಿಗೆ ವಾಸವಾಗಿದ್ದ ಗೆಳತಿಯರಿಗೂ ಈ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಇಶಾ ಅವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

ಮಹಿಳೆ ಸಾವು: ತುಮಕೂರು ರಸ್ತೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ ಡಿಕ್ಕಿ ಹೊಡೆದಿದ್ದರಿಂದ ಅಪರಿಚಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಶೋಭಾ ಅಪಾರ್ಟ್‌ಮೆಂಟ್‌ ಸಮೀಪ ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಹಿಳೆ ರಸ್ತೆ ದಾಟುತ್ತಿದ್ದರು. ಈ ವೇಳೆ ತುಮಕೂರು ಕಡೆಯಿಂದ ವೇಗವಾಗಿ ಬಂದ ಬಸ್‌ ಡಿಕ್ಕಿ ಹೊಡೆದಿದೆ.

ಕೆಳಕ್ಕೆ ಬಿದ್ದ ಅವರ ಮೇಲೆ ಬಸ್‌ನ ಹಿಂದಿನ ಚಕ್ರಗಳು ಹರಿದಿದ್ದರಿಂದ, ಸ್ಥಳದಲ್ಲೇ ಮೃತಪಟ್ಟರು. ಬಸ್‌ ಚಾಲಕ ಮಹಾಂತ್ ಗೌಡನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT