ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲಯ ಅಮಾವಾಸ್ಯೆ: ಹೆಚ್ಚುವರಿ ಬಸ್‌

Last Updated 6 ಅಕ್ಟೋಬರ್ 2015, 20:01 IST
ಅಕ್ಷರ ಗಾತ್ರ

ಬೆಂಗಳೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ   ಪ್ರಯಾಣಿಕರ ಅನುಕೂಲಕ್ಕೆ ಕೆಎಸ್‌ಆರ್‌ಟಿಸಿ ಇದೇ 9 ಹಾಗೂ  10ರಂದು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಿದೆ.

ಮೆಜೆಸ್ಟಿಕ್‌ನಲ್ಲಿ ಮೆಟ್ರೊ ಕಾಮಗಾರಿ  ನಡೆಯುತ್ತಿದೆ. ಹೀಗಾಗಿ ನಗರದ ವಿವಿಧ ಪಿಕಪ್ ಪಾಯಿಂಟ್‌ಗಳಿಂದ ಮುಂಗಡ ಬುಕ್ಕಿಂಗ್ ವ್ಯವಸ್ಥೆಯ ಬಸ್‌ಗಳು ಸಂಚಾರ ನಡೆಸಲಿವೆ. ಮೈಸೂರು ರಸ್ತೆ ಸ್ಯಾಟಲೈಟ್‌ ಬಸ್‌ ನಿಲ್ದಾಣ, ಪೀಣ್ಯ, ವಿಜಯನಗರ ಟಿಟಿಎಂಸಿ, ಗಂಗಾನಗರ, ಮಲ್ಲೇಶ್ವರ 18ನೇ ಕ್ರಾಸ್, ಜಯನಗರ 4ನೇ ಬ್ಲಾಕ್ ಮತ್ತಿತರ ಸ್ಥಳಗಳಿಂದ ಕಾರ್ಯಾಚರಣೆ ನಡೆಸಲಿವೆ.

ಹೆಚ್ಚುವರಿ ವಾಹನಗಳಿಗೆ ಮುಂಗಡ ಟಿಕೆಟ್ ಪಡೆಯುವ ಪ್ರಯಾಣಿಕರು  ಈ ಸ್ಥಳಗಳಿಂದಲೇ ಪ್ರಯಾಣಿಸಬಹುದಾಗಿದೆ ಹಾಗೂ ಮುಂಗಡ ರಹಿತ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.  ದಾವಣಗೆರೆ, ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ, ಶಿವಮೊಗ್ಗ ಮಾರ್ಗದ ಮುಂಗಡ ರಹಿತ ಮತ್ತು ಹೆಚ್ಚುವರಿ ವಾಹನಗಳನ್ನು ಮೆಜೆಸ್ಟಿಕ್‌ ನಿಲ್ದಾಣದ ಮುಂಭಾಗದ ಬಿಎಂಟಿಸಿ ಸರ್ವಿಸ್‌ ರಸ್ತೆಯ ಮೂಲಕ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT