ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ: ಸುಷ್ಮಾ ಆಶಯ

Last Updated 11 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಹಿಳಾ ಸಬಲೀಕರಣದ ಬಗ್ಗೆ ಲೋಕಸಭೆಯಲ್ಲಿ ಬುಧವಾರ ಮಾತನಾಡಿದ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವು 16ನೇ ಲೋಕಸಭೆಯ ಮೈಲಿಗಲ್ಲಾಗಬೇಕು ಎಂದು ಆಶಿಸಿದರು.
ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರವು ನಾಲ್ಕು ವರ್ಷಗಳ ಹಿಂದೆ ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದಾಗ ಬಿಜೆಪಿಯು
ಸಹಕಾರ ನೀಡಿತ್ತು.

ಈಗ ಕಾಂಗ್ರೆಸ್‌ ಸರ್ಕಾರವು ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಈ ಮಸೂದೆ ಅಂಗೀಕರಿಸಲು ನೆರವು ನೀಡ­ಬೇಕು ಎಂದು ಕೋರಿದರು. ಆಗ ತಕ್ಷ­ಣವೇ ಕಾಂಗ್ರೆಸ್‌ ನಾಯಕ ಮಲ್ಲಿಕಾ­ರ್ಜುನ ಖರ್ಗೆ ಅವರು ಸಹ­ಕರಿಸುವ ಭರವಸೆ ನೀಡಿದರು.

ಭಾರತದ ಆರ್ಥಿಕ ಬೆಳವಣಿಗೆ ನಿಂತೇ ಹೋಯಿತು ಎಂಬ ಆತಂಕದ ವಾತಾ­ವರಣ ನಿರ್ಮಾಣವಾಗಿತ್ತು. ಈಗ ಹೊಸ ಸರ್ಕಾರ ರಚನೆಯಾದ ಮೇಲೆ ಇಲ್ಲಿ ಆರ್ಥಿಕತೆ ಬೆಳೆಯಲು ಅಪಾರ ಅವ­ಕಾಶವಿದೆ ಎಂಬ ಸನ್ನಿವೇಶ ಮೂಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT