ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೃಭಾಷೆ ಶಿಕ್ಷಣಕ್ಕೆ ಜೈಕಾರ

ಸಾಹಿತ್ಯ ಸಮ್ಮೇಳನದಲ್ಲಿ ಒಕ್ಕೊರಲ ಅಭಿಪ್ರಾಯ
Last Updated 7 ಏಪ್ರಿಲ್ 2015, 6:03 IST
ಅಕ್ಷರ ಗಾತ್ರ

ತುಮಕೂರು: ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸುವ ಮಸೂದೆಗೆ ಸೋಮವಾರ ನಡೆದ ಹನ್ನೊಂದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಒಕ್ಕೊರಲಿನಿಂದ ಬೆಂಬಲಿಸಿತು.

ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಆತಂಕ ಎದುರಾಗಿದೆ. ಬಹುತೇಕ ಮನೆ, ಮನಗಳಲ್ಲಿ ಕನ್ನಡ ಭಾಷೆಗೆ ವಂಚನೆ ಎಸಗುತ್ತಿರುವ ಸಂದೇಹ ಕಾಡುತ್ತಿದೆ ಎಂದು ಜಿ.ಪಂ. ಅಧ್ಯಕ್ಷ ವೈ.ಎಚ್‌.ಹುಚ್ಚಯ್ಯ ಹೇಳಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಇಂಗ್ಲಿಷ್‌ ಶಾಲೆಗಳ ಸ್ವೇಚ್ಛಾಚಾರ ಹೆಚ್ಚಾಗಿದೆ. ಜನಪ್ರತಿನಿಧಿಗಳೂ ಕೂಡ ಇಂಗ್ಲಿಷ್ ಶಾಲೆಗಳ ಬೆನ್ನಿಗೆ ನಿಂತಿರುವುದು ವಿಪರ್ಯಾಸ ಎಂದರು.

ಕನ್ನಡ ಭಾಷೆ ಮೇಲೆ ದಾಳಿ, ದಬ್ಬಾಳಿಕೆ ನಡೆದರೂ ಅದನ್ನು ಸಹಿಸಿಕೊಂಡು ಹೋಗುವ ಗುಣ ಕನ್ನಡಕ್ಕಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್‌.ಸತ್ಯಮೂರ್ತಿ ತಿಳಿಸಿದರು.

ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳ ಯಾವ ನಿರ್ಣಯವನ್ನೂ ಈವರೆಗೆ ಅನುಷ್ಠಾನಗೊಳಿಸಿಲ್ಲ. ಈ ಬಗ್ಗೆ ಗಂಭೀರ ಚರ್ಚೆ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್‌.ಗೋವಿಂದರಾಜು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT