ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನನಷ್ಟ ಮೊಕದ್ದಮೆ: ರಾಹುಲ್‌ ವಿಚಾರಣೆಗೆ ಸುಪ್ರೀಂ ತಡೆ

Last Updated 7 ಮೇ 2015, 7:11 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಂಗ್ರೆಸ್‌ ಪಕ್ಷದ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ  ಮೊಕದ್ದಮೆ ವಿಚಾರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಗುರುವಾರ ತಡೆ ನೀಡಿದೆ.

2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದು ಆರ್‌ಎಸ್‌ಎಸ್‌ ಎಂದು ರಾಹುಲ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು  ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.

ರಾಹುಲ್‌ ಗಾಂಧಿ ಈ ಪ್ರಕರಣವನ್ನು ವಜಾಗೊಳಿಸುವಂತೆ ಬಾಂಬೆ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದನ್ನು ಕೋರ್ಟ್‌ ವಜಾಗೊಳಿಸಿತ್ತು. ರಾಹುಲ್‌ ಮತ್ತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದೀಪಕ್‌ ಮಿಶ್ರಾ ಮತ್ತು ಪಿ.ಸಿ ಪಂತ್‌ ವಿಚಾರಣೆಗೆ ತಾತ್ಕಲಿಕ ತಡೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT