ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಕೊಲೆ

Last Updated 23 ನವೆಂಬರ್ 2014, 19:51 IST
ಅಕ್ಷರ ಗಾತ್ರ

ಬೆಂಗಳೂರು: ಕಾಡುಗೊಂಡನಹಳ್ಳಿ ಸಮೀಪದ ಬಾಗಲೂರು ಲೇಔಟ್‌­ನಲ್ಲಿ ಭಾನುವಾರ ರಾತ್ರಿ ರೌಡಿ ಶೀಟರ್ ವಿನೋದ್‌ (30) ಎಂಬಾತ­ನನ್ನು ದುಷ್ಕರ್ಮಿಗಳು ಮಾರಕಾಸ್ತ್ರ­ಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಬಾಗಲೂರು ಲೇಔಟ್ ನಿವಾಸಿಯಾದ ವಿನೋದ್‌ ರಾತ್ರಿ 9.30ರ ಸುಮಾರಿಗೆ ಸ್ನೇಹಿತನ ಮಗನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿ­ಕೊಂಡು ಮನೆಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಹೊಟ್ಟೆ ಹಾಗೂ ತಲೆಗೆ ಮಚ್ಚಿ­ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

2012ರಲ್ಲಿ ರೌಡಿ ಶೀಟರ್‌ ಡ್ಯಾನಿ­ಯಲ್‌ ಕೊಲೆ ಪ್ರಕರಣದ ಆರೋಪಿ­ಯಾಗಿದ್ದ ವಿನೋದ್‌, ಒಂದು ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಡ್ಯಾನಿಯಲ್‌ನ ಸೋದರರೇ ಕೃತ್ಯ ಎಸಗಿರುವ ಸಾದ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಕಾಡುಗೊಂಡನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT