ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಆರ್‌ಬಿಐ ಕಟ್ಟಡಕ್ಕೆ ಬೆಂಕಿ

Last Updated 4 ಸೆಪ್ಟೆಂಬರ್ 2015, 6:26 IST
ಅಕ್ಷರ ಗಾತ್ರ

ಮುಂಬೈ(ಪಿಟಿಐ): ಮುಂಬೈ ಉಪನಗರ ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಕಟ್ಟಡಕ್ಕೆ ಶುಕ್ರವಾರ ಬೆಂಕಿ ಬಿದ್ದಿದೆ.

ಆರ್‌ಬಿಐ ಕಟ್ಟಡದಲ್ಲಿ ಬೆಳಿಗ್ಗೆ 8.30ಕ್ಕೆ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿ ಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಳಿಗ್ಗೆ 8.30ರ ಸುಮಾರಿಗೆ ಸ್ಫೋಟದ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡದಲ್ಲಿನ ಕೇಂದ್ರೀಯ ಬ್ಯಾಂಕ್ ಕಚೇರಿಯಲ್ಲಿ ಬೆಂಕಿಯ ಅವಘಡ ಸಂಭವಿಸದೆ. ಬೆಂಕಿ ನಿಯಂತ್ರಣದಲ್ಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT