ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ನ್ಯಾಯಮೂರ್ತಿಯಾಗಿ ಲೋಧಾ ಪ್ರಮಾಣವಚನ

Last Updated 27 ಏಪ್ರಿಲ್ 2014, 11:03 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ) ಸುಪ್ರೀಂ ಕೋರ್ಟ್‌ನ 41ನೇ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ರಾಜೇಂದ್ರ ಮಲ ಲೋಧಾ ಅವರು ಭಾನುವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ 64 ವಯಸ್ಸಿನ ಲೋಧಾ ಅವರಿಗೆ ಪ್ರಣಬ್ ಅವರು ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕೆಲ ಕೇಂದ್ರ ಸಚಿವರು ಮತ್ತು ನಿವೃತ್ತ ಹಾಗೂ ಸೇವೆ ಸಲ್ಲಿಸುತ್ತಿರುವ ಹಿರಿಯ ನ್ಯಾಯಮೂರ್ತಿಗಳು ಹಾಜರಿದ್ದರು. ಆದರೆ, ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ಗೈರಾಗಿದ್ದರು.

ಲೋಧಾ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಲೋಧಾ ಅವರ ಅಧಿಕಾರಾವಧಿಯು ಐದು ತಿಂಗಳಿದ್ದು, ಅವರು ಇದೇ ವರ್ಷದ ಸೆಪ್ಟೆಂಬರ್ 27ಕ್ಕೆ ನಿವೃತ್ತರಾಗಲಿದ್ದಾರೆ.

ಈ ಹಿಂದಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಿ.ಸದಾಶಿವಂ ಅವರು ತಮ್ಮ ಒಂಬತ್ತು ತಿಂಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿ ಶನಿವಾರವಷ್ಟೇ ನಿವೃತ್ತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT