ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಕಡೆ ಅಪಘಾತ: 12 ಸಾವು

Last Updated 8 ಅಕ್ಟೋಬರ್ 2015, 20:05 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲಕೋಟೆ, ಧಾರವಾಡ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ಗುರುವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ  20 ದಿನಗಳ ಹಸುಗೂಸು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ.

ಬಾಗಲಕೋಟೆ ತಾಲ್ಲೂಕಿನ ಭಗವತಿ ಗ್ರಾಮದ ಬಳಿ ಬಾಗಲಕೋಟೆ– ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ಸಾರಿಗೆ ಬಸ್‌ ಮತ್ತು ಟಾಟಾ–ಏಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 20 ದಿನಗಳ ಹಸುಗೂಸು ಸೇರಿದಂತೆ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಒಂಬತ್ತು ಜನರು ಗಾಯಗೊಂಡಿದ್ದಾರೆ.

ಟಿಪ್ಪರ್‌ ಡಿಕ್ಕಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ಮೂವರಿಗೆ ಟಿಪ್ಪರ್‌ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಧಾರವಾಡ ತಾಲ್ಲೂಕಿನ ಕೋಟೂರು ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

ಸೇತುವೆಗೆ ಕಾರು ಡಿಕ್ಕಿ ಹೊಡೆದ ಸಂಭವಿಸಿದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಬಳಿ ಬೆಂಗಳೂರು– ಬಳ್ಳಾರಿ ರಾಜ್ಯಹೆದ್ದಾರಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT