ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Last Updated 3 ಆಗಸ್ಟ್ 2015, 20:18 IST
ಅಕ್ಷರ ಗಾತ್ರ

ಬೆಂಗಳೂರು: ಇಂದಿರಾನಗರದ ಖಾಸಗಿ ಶಾಲೆಯಲ್ಲಿ ಮೂರು ವರ್ಷದ ಬಾಲಕಿ ಮೇಲೆ ಭದ್ರತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸೋಮವಾರ ನಡೆದಿದೆ.

ಮಧ್ಯಾಹ್ನ 12.30ರ ಸುಮಾರಿಗೆ ಬಾಲಕಿ ಮನೆಗೆ ಅಳುತ್ತಾ ಬಂದಳು. ಪೋಷಕರು ಏನಾಯಿತೆಂದು ವಿಚಾರಿಸಿದಾಗ, ‘ಶಾಲೆಯ ಅಂಕಲ್‌’ ಎಂದು ಹೇಳಿದ್ದಾಳೆ. ಇದರಿಂದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರಬಹುದೆಂದು ಆತಂಕಗೊಂಡ ಪೋಷಕರು, ಕೂಡಲೇ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಘಟನೆ ಎಲ್ಲಿ ನಡೆದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಾಲಕಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಂಗಳವಾರ ವರದಿ ಸಿಗಲಿದೆ ಎಂದು ಪೊಲೀಸರು ತಿಳಿಸಿದರು. ಘಟನೆ ಸಂಬಂಧ ಇಂದಿರಾನಗರ ಠಾಣೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೊಕ್ಸೊ) ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT