ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯಕ್ಕೆ ಆಗ್ರಹಿಸಿ ವಕೀಲರ ಪ್ರತಿಭಟನೆ

Last Updated 26 ನವೆಂಬರ್ 2015, 20:15 IST
ಅಕ್ಷರ ಗಾತ್ರ

ಹೊಸಕೋಟೆ: ಮೂಲ ಸೌಕರ್ಯಕ್ಕೆ ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದ ಸದಸ್ಯರು ಗುರುವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

‘ಕಿಷ್ಕಿಂದೆಯಂತಹ  ಹಳೆಯ ಕಟ್ಟಡದಲ್ಲಿ ನ್ಯಾಯಾಲಯ ಕೆಲಸ ನಿರ್ವಹಿಸುತ್ತಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ನ್ಯಾಯಾಲಯ ಮತ್ತು ವಕೀಲರ ಸಂಘದ ಕಟ್ಟಡದ ಗೋಡೆಗಳಲ್ಲಿ ನೀರಿಳಿದು ವಿದ್ಯುತ್ ಪ್ರವಹಿಸುತ್ತಿದೆ’ ಎಂದು ವಕೀಲರ ಸಂಘದ ಅಧ್ಯಕ್ಷ ಮುತ್ಕೂರು ಆರ್. ಮನೋಹರ್ ತಿಳಿಸಿದರು.

‘ಕಲಾಪ ನಡೆಯುವ ಕೊಠಡಿಯ ಸೀಲಿಂಗ್ ಉದುರುತ್ತಿದೆ. ಕಟ್ಟಡ ಶಿಥಿಲಗೊಂಡಿರುವ ಕಾರಣ  ಛಾವಣಿ ಮೇಲೆ ನಿಂತಿರುವ ಮಳೆ ನೀರು ತೊಟ್ಟಿಕ್ಕುತ್ತಿದೆ. ಇದರಿಂದ ಕಡತಗಳು ನೆನೆದು ಹಾಳಾಗುತ್ತಿವೆ. ಹಾಗಾಗಿ ಕಟ್ಟಡ ದುರಸ್ತಿಗೊಳಿಸಿ, ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT