ವಿಜಯಪುರ: ವಿಜ್ಞಾನ ಶಿಕ್ಷಣ, ಅಂಗವಿಕಲರ ಕಲ್ಯಾಣ, ಧಾರ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಮೂವರು ಮಹಿಳೆಯರಿಗೆ ರಾಜ್ಯ ಮಹಿಳಾ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ ಎಂದು ವಿ.ವಿ. ಕುಲಪತಿ ಪ್ರೊ. ಮೀನಾ ಆರ್. ಚಂದಾವರಕರ ತಿಳಿಸಿದರು.

ಬಸವಾದಿ ಶಿವಶರಣರ ತತ್ವಾದರ್ಶ ಗಳನ್ನು ಜನ ಸಾಮಾನ್ಯರಿಗೆ ತಲುಪಿಸಲು ಶ್ರಮಿಸುತ್ತಿರುವ ಕಲಬುರ್ಗಿಯ ವಿಲಾಸವತಿ ಖೂಬಾ, ವಿಜ್ಞಾನ ಶಿಕ್ಷಣ ಜನಪ್ರಿಯಗೊಳಿಸುವಲ್ಲಿ ನಿರತಾಗಿರುವ ಬೆಂಗಳೂರಿನ ಇಂದೂಮತಿ ರಾವ್, ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಧು ಸಿಂಘಾಲ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಹೇಳಿದರು.

ಇದೇ 3ರಂದು ವಿ.ವಿ.ಯ ಜ್ಞಾನಶಕ್ತಿ ಆವರಣದಲ್ಲಿ ನಡೆಯಲಿರುವ 6ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡುವ ಜತೆಗೆ ಸಾಧಕರಿಗೂ ಪದವಿ ಪ್ರದಾನ ಮಾಡಲಾಗುವುದು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಚಿನ್ನದ ಹುಡುಗಿಯರು: ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ 37 ವಿದ್ಯಾರ್ಥಿನಿಯರಿಗೆ 46 ಚಿನ್ನದ ಪದಕ, 23 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ, ಏಳು ವಿದ್ಯಾರ್ಥಿನಿಯರಿಗೆ ಎಂ.ಫಿಲ್ ಪದವಿಯನ್ನು ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ. ಸ್ನಾತಕ, ಸ್ನಾತಕೋತ್ತರ ಹಾಗೂ ಪಿ.ಜಿ ಡಿಪ್ಲೊಮಾ ಸೇರಿ ಒಟ್ಟು 8,622 ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.