ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಕೆಜೋಳದ ಉಪಯೋಗ

Last Updated 24 ಜುಲೈ 2015, 19:54 IST
ಅಕ್ಷರ ಗಾತ್ರ

* ಮೆಕ್ಕೆ ಜೋಳದಲ್ಲಿ ಅಧಿಕ ನಾರಿನಂಶ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.

* ಜೋಳದಲ್ಲಿ ವಿಟಮಿನ್ ಬಿ ಮತ್ತು ಫಾಲಿಕ್ ಆಸಿಡ್ ಅಂಶವಿರುವುದರಿಂದ ದೇಹದಲ್ಲಿ ರಕ್ತ ಹೆಚ್ಚಾಗಲು ಸಹಕಾರಿಯಾಗಿದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಉಂಟಾಗುವುದಿಲ್ಲ.

* ಇದರ ಸೇವನೆಯಿಂದ ರಕ್ತದಲ್ಲಿ ಕೊಬ್ಬಿನಂಶ ಸೇರಿಕೊಳ್ಳುವುದನ್ನು ತಡೆಯಬಹುದು.

* ದೇಹದಲ್ಲಿ ಸೇರಿಕೊಂಡಿರುವ ಕೊಲೆಸ್ಟರಾಲ್‌ ಕಡಿಮೆಯಾಗುತ್ತದೆ. ಕೊಲೆಸ್ಟರಾಲ್‌ನಲ್ಲಿ 2 ವಿಧ. ಒಳ್ಳೆಯ ಕೊಲೆಸ್ಟರಾಲ್‌ ಮತ್ತು ಕೆಟ್ಟ ಕೊಲೆಸ್ಟರಾಲ್‌. ಕೆಟ್ಟ ಕೊಲೆಸ್ಟರಾಲ್‌ ದೇಹದಲ್ಲಿ ಹೆಚ್ಚಾದರೆ ದೇಹದ ತೂಕ ಹೆಚ್ಚಾಗುವುದು, ಒಬೆಸಿಟಿ ಸಮಸ್ಯೆ ಪ್ರಾರಂಭವಾಗುತ್ತದೆ. ಆದರೆ ಜೋಳದಲ್ಲಿ ಒಳ್ಳೆಯ ಕೊಲೆಸ್ಟರಾಲ್‌ ಇದ್ದು, ದೇಹದ ಆರೋಗ್ಯವನ್ನು ಹೆಚ್ಚು ಮಾಡುತ್ತದೆ.

* ಮಧುಮೇಹ ಮತ್ತು ಅಧಿಕವಾದ ಒತ್ತಡವನ್ನು ಮೆಕ್ಕೆಜೋಳ ಸೇವನೆಯಿಂದ ಕಡಿಮೆ ಗೊಳಿಸಬಹುದು. ಇದು ಕರುಳಿನ ಕ್ಯಾನ್ಸರನ್ನು ದೂರವಿರುಸುವುದಲ್ಲದೆ ಇದು ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆಗೊಳಿಸುವ ಮೂಲಕ ಮಧುಮೇಹಿಗಳಿಗೆ ಸಹಾಯಕವಾಗಿದೆ.

* ಅಧಿಕ ಮ್ಯಾಗ್ನಿಷಿಯಂ, ಕಬ್ಬಿಣ, ಸತು, ರಂಜಕ ಇರುವುದರಿಂದ ಮೂಳೆಗೆ ಒಳ್ಳೆಯದು. ಮೂಳೆಯನ್ನು ಬಲಪಡಿಸುವುದು ಮಾತ್ರವಲ್ಲ, ಕಿಡ್ನಿ ಸರಿಯಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ.

* ಇದರ ನಿಯಮಿತ ಸೇವನೆ ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ವಿಟಮಿನ್ ಬಿ ಜೋಳದಲ್ಲಿ ಹೆಚ್ಚಿರುವ ಕಾರಣ ಇದು ನರಮಂಡಲವನ್ನು ಆರೋಗ್ಯಕರವಾಗಿಡುತ್ತದೆ.

* ಮೆಕ್ಕೆಜೋಳವನ್ನು ಕಾಸ್ಮೆಟಿಕ್‌ಗಳಲ್ಲೂ ಹೆಚ್ಚು ಬಳಕೆ ಮಾಡುತ್ತಾರೆ. ಇದು ಚರ್ಮದಲ್ಲಿ ತುರಿಕೆ ಮತ್ತು ಕಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದರ ಎಣ್ಣೆಯನ್ನು ಹಚ್ಚಿಕೊಂಡರೆ ತ್ವಚೆ ಅಲರ್ಜಿ, ತ್ವಚೆಯಲ್ಲಿ ಕೆಂಪು ಗುಳ್ಳೆಗಳಾಗುವುದನ್ನು ತಡೆಯಬಹುದು.

* ಕಣ್ಣುಗಳ ತೀಕ್ಷ್ಣತೆ ಹೆಚ್ಚಿಸಿಕೊಳ್ಳಲು ಮತ್ತು ಮೃದುವಾದ ತ್ವಚೆ ಹೊಂದಲು ಅವಶ್ಯವಿರುವ ವಿಟಮಿನ್ ಎ ಇದರಲ್ಲಿ ಹೆಚ್ಚಿರುತ್ತದೆ.

* ಗರ್ಭಿಣಿಯರ ಆರೋಗ್ಯಕ್ಕೆ ಸ್ವೀಟ್‌ಕಾರ್ನ್‌ ಒಳ್ಳೆಯದು. ಇದನ್ನು ಸೇವಿಸುವುದರಿಂದ ಫಾಲಿಕ್ ಆಸಿಡ್ ಕೊರತೆಯನ್ನು ನೀಗಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT