ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಭೇಟಿಯಾದ ಮನಮೋಹನ್ ಸಿಂಗ್

Last Updated 27 ಮೇ 2015, 14:42 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2 ಜಿ ತರಂಗಾಂತರ ಹಗರಣ ಪ್ರಕರಣ ಸಂಬಂಧ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೆಲ ಗಂಟೆಗಳಲ್ಲಿಯೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಕುತೂಹಲಕರ ವಿದ್ಯಮಾನ ನಡೆದಿದೆ.

ನಗರದ 7 ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಪ್ರಧಾನಿ ಅವರ ಅಧಿಕೃತ ನಿವಾಸಕ್ಕೆ ಮನಮೋಹನ್‌ ಸಿಂಗ್‌ ಬುಧವಾರ ಭೇಟಿ ನೀಡಿದ್ದರು. 

‘ಡಾ.ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ನೀಡಿತು. ನಮ್ಮ ಮಧ್ಯೆ ಉತ್ತಮ ಚರ್ಚೆಗಳಾದವು. ಸಿಂಗ್ ಅವರೆ ಮತ್ತೊಮ್ಮೆ ಭೇಟಿ ನೀಡಿ’ ಎಂದು ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಆದರೆ ಯಾವ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT